ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ Minister MBPatil ಅವರು ಭಾರತದಲ್ಲಿನ ಅಮೆರಿಕದ ಕಾನ್ಸುಲೇಟ್ ಜನರಲ್ ಶ್ರೀ ಕ್ರಿಸ್ಟೋಫರ್ ಡಬ್ಲ್ಯು. ಹೋಡ್ಜಸ್ ಅವರ ಜೊತೆ ಮಂಗಳವಾರ ಇಲ್ಲಿ ಸಭೆ ನಡೆಸಿದರು.
‘ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಗುರುತಿಸಿರುವ ಪ್ರದೇಶದಲ್ಲಿ ಕಾನ್ಸುಲೇಟ್ ಜನರಲ್ ಕಚೇರಿ ಸ್ಥಾಪಿಸುವುದನ್ನು ಪರಿಗಣಿಸಬೇಕು’ ಎಂದು ಸಚಿವ ಪಾಟೀಲ ಅವರು ಸಭೆಯಲ್ಲಿ ಅಮೆರಿಕದ ಕಾನ್ಸುಲೇಟ್ ಜನರಲ್ ಅವರಿಗೆ ಮನವಿ ಮಾಡಿಕೊಂಡರು.

Also read: Rs. 115 Crore recovered from KIADB plot allottees: Minister MB Patil
ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಸೆಮಿಕಂಡಕ್ಟರ್, ಜೈವಿಕ ತಂತ್ರಜ್ಞಾನ, ಮಷಿನ್‌ಟೂಲ್ಸ್ ಮತ್ತಿತರ ವಲಯಗಳಲ್ಲಿ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳ ಬಗ್ಗೆಯೂ ಸಚಿವ ಪಾಟೀಲ ಅವರು ಕಾನ್ಸುಲೇಟ್ ಜನರಲ್ ಅವರಿಗೆ ಮಾಹಿತಿ ನೀಡಿದರು,

‘ಕರ್ನಾಟಕದ 2 ಮತ್ತು 3ನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಅಮೆರಿಕದ ಕಂಪನಿಗಳು ಆಸಕ್ತಿ ಹೊಂದಿವೆ’ ಎಂದು ಕ್ರಿಸ್ಟೋಫರ್ ಡಬ್ಲ್ಯು. ಹೋಡ್ಜಸ್ ಅವರು ಹೇಳಿದರು. ಸಚಿವರ ಜೊತೆಗಿನ ಸಭೆಯಲ್ಲಿ ಅಮೆರಿಕದ ಕಂಪನಿಗಳ ಪರವಾಗಿ ಅವರು ಈ ಇಂಗಿತ ವ್ಯಕ್ತಪಡಿಸಿದರು.

‘ಬೆಂಗಳೂರಿನ ಆಚೆಗಿನ ನಗರಗಳಲ್ಲಿ ಇರುವ ಮೂಲಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಅಮೆರಿಕದ ವಾಣಿಜ್ಯ ನಿಯೋಗವು ಫೆಬ್ರುವರಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲಿದೆ. ರಾಜ್ಯದಲ್ಲಿನ 2 ಮತ್ತು 3 ಹಂತದ ನಗರಗಳು ಅಮೆರಿಕದ ಕಂಪನಿಗಳಿಗೆ ಸೂಕ್ತವಾದ ಮೂಲಸೌಲಭ್ಯಗಳನ್ನು ಒದಗಿಸಲಿವೆಯೇ ಎನ್ನುವುದನ್ನು ನಿಯೋಗವು ಪರಿಶೀಲಿಸಲಿದೆ’ ಎಂದು ಶ್ರೀ ಹೋಡ್ಜಸ್ ಅವರು ಶ್ರೀ ಪಾಟೀಲ ಅವರ ಗಮನಕ್ಕೆ ತಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post