ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇಂದು ವಿಧಾನಸೌಧದಲ್ಲಿ ಆಯೋಜಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ಚಾಲನೆ ನೀಡಿದರು.
ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಂದಿಗೆ ಸಂವಾದ ನಡೆಸಲಾಯಿತು. ಈ ಯೋಜನೆಯಿಂದಾಗಿ ಹೆಚ್ಚಿನ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
Also read: ಹಿಂದುಯೇತರರಿಗೆ ತಿರುಪತಿಯಿಂದ ಗೇಟ್ ಪಾಸ್ | ಐತಿಹಾಸಿಕ ನಿರ್ಧಾರ ಕೈಗೊಂಡ ಟಿಟಿಡಿ
ಮೊದಲ ಹಂತದಲ್ಲಿ 25,000 ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಲಾಗಿದ್ದು, ಪರಿಣಿತ ಉಪನ್ಯಾಸಕರಿಂದ ಪ್ರತಿದಿನ ಈ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ. ಪದವಿ ಪೂರ್ವ ಕಾಲೇಜಿನ 20 ಸಾವಿರ ವಿದ್ಯಾರ್ಥಿಗಳು ಹಾಗೂ ಆದರ್ಶ ಕಾಲೇಜಿನ 5 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್, ಪೇಸ್ ಸಂಸ್ಥೆಯ ನಿರ್ದೇಶಕ ಪ್ರವೀಣ್ ತ್ಯಾಗಿ, ಪದವಿ ಪೂರ್ವ ಜಂಟಿ ನಿರ್ದೇಶಕರಾದ ಡಾ.ರೂಪಶ್ರೀ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post