ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಲ್ಲಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ಬಹುತೇಕ ಡಿಸಿಎಂ ಆಗುವುದು ನಿಶ್ಚಿತ ಎಂಬ ನಿರೀಕ್ಷೆ ಹುಸಿಯಾಗಿದ್ದು, ಹೈಕಮಾಂಡ್ ಸಾಥ್ ನೀಡಿವೆ.
ಬಿಜೆಪಿ ವರಿಷ್ಠರ ಸೂಚನೆಯಂತೆ 29 ನೂತನ ಸಚಿವರು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಪಟ್ಟಿಯಿಂದ ಬಿ.ವೈ. ವಿಜಯೇಂದ್ರ ಹೆಸರು ಹೊರಬಿದ್ದಿರುವುದು ಅಚ್ಚರಿಗೆ ಕಾರಣವಾಗಿದೆ.
ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ನೀಡುವ ಕುರಿತು ಬಾರಿ ಒತ್ತಡ ಹೇರಲಾಗಿತ್ತು. ಯಡಿಯೂರಪ್ಪ ರಾಜೀನಾಮೆ ನಂತರ ಅವರ ಪುತ್ರನಿಗೆ ಡಿಸಿಎಂ ಅಥವಾ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಒಲವು ತೋರಿಸಿದ್ದೆ ಎಂದು ಹೇಳಲಾಗಿತ್ತು. ಆದರೆ, ಕೊನೆ ಗಳಿಗೆಯಲ್ಲಿ ವಿಜಯೇಂದ್ರ ಅವರಿಗೆ ಸ್ಥಾನ ಕೈ ತಪ್ಪಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತಂತೆ ಮಾತನಾಡಿರುವ ಸಿಎಂ ಬೊಮ್ಮಾಯಿ ಈ ವಿಚಾರದ ಕುರಿತು ನಮ್ಮ ರಾಷ್ಟ್ರೀಯ ನಾಯಕರೇ ವಿಜಯೇಂದ್ರ ಜೊತೆ ನೇರವಾಗಿ ಮಾತನಾಡಿದ್ದಾರೆ. ಈಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದಷ್ಟೇ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post