ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಾಗರ ಬಿ.ಹೆಚ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಶೀಘ್ರದಲ್ಲಿ ರಸ್ತೆಯ ಅಗಲೀಕರಣ ಕಾಮಗಾರಿ ಪ್ರಾರಂಭವಾಗುತ್ತಿದೆ. ಸಾಗರ ನಗರ ಪೊಲೀಸ್ ಠಾಣೆ (ಜೋಗ್ ಸರ್ಕಲ್) ಭಾಗಶಃ ಹಾನಿಯಾಗಲಿದ್ದು, ಸದರಿ ಠಾಣೆಗೆ ಬೇರೆಡೆ ಸ್ಥಳ ಮಂಜೂರು ಮಾಡುವ ಬಗ್ಗೆ ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಶಾಸಕ ಹೆಚ್.ಹಾಲಪ್ಪ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post