ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಶಾಸಕ ಹೆಚ್.ಹಾಲಪ್ಪ ಅವರು ಸಾಗರ ನಗರಸಭೆ ನಿಯೋಗದೊಂದಿಗೆ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಲ್ಲಿ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಮಂಜೂರಾದ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಈಗಾಗಲೇ ಕೆಲ ಫಲಾನುಭವಿಗಳು ಮನೆಗಳನ್ನು ಪೂರ್ಣಗೊಳಿಸಿದ್ದಾರೆ, ಇನ್ನು ಕೆಲವರ ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು ಫಲಾನುಭವಿಗಳು ಸಂಕಷ್ಟದಲ್ಲಿದ್ದಾರೆ. ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವಂತೆ. ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ವಸತಿ ರಹಿತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯಾದ “ಸರ್ವರಿಗೂ ಸೂರು ಯೋಜನೆ” ಯಲ್ಲಿ ೫೦೦ ಮನೆಗಳ ಉ+೧ ಮಹಡಿಯ ವಸತಿ ಸಮುಚ್ಚಯ ನಿರ್ಮಾಣಕ್ಕೆ ಮಂಜೂರಾತಿ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿದರು.
ಮನವಿಗೆ ಸ್ಪಂದಿಸಿದ ಸಚಿವರು ವಸತಿ ಇಲಾಖೆ ಅಧಿಕಾರಿಗಳು ಸಾಗರಕ್ಕೆ ಭೇಟಿ ನೀಡಿ, ಪರಿಶೀಲಿಸಿ, ವರದಿ ಸಲ್ಲಿಸುವಂತೆ ಸೂಚಿಸಿದ್ದು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post