ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವ ಬಗ್ಗೆ ಶಾಸಕ ರಘುಪತಿ ಭಟ್ MLA Raghupathi Bhat ಒತ್ತಾಯ.
ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಕರಾವಳಿ ಭಾಗದ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ಕೆ. ರಘುಪತಿ ಭಟ್ ಒತ್ತಾಯಿಸಿದರು.
Also read: ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸಲು ಅವಕಾಶವಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ಸಭೆಯಲ್ಲಿ ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಚರ್ಚಿಸಿ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಇರುವ ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಸುಗಮಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಕರಾವಳಿ ಭಾಗದಲ್ಲಿ ಮರಳು ತೆಗೆಯುವಲ್ಲಿ ಇರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.
ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಹಾಗೂ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವ ಬಗ್ಗೆ ಶೀಘ್ರದಲ್ಲೇ ಸೂಕ್ತ ಕ್ರಮಕೈಗೊಳ್ಳುವುದಾಗಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಭರವಸೆ ನೀಡಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ರಾಮಮನೋಹರ ಪ್ರಸನ್ನ ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post