ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ Siddaramaiah ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ತಿಳಿಸಿದರು.
ಅವರು ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿ, ಆರ್ ಎಸ್ ಎಸ್ ನವರು ಹೊರಗಿನಿಂದ ಬಂದವರು, ನೆಹರೂ ಅವರಿಗೆ ಹೋಲಿಕೆ ಮಾಡಬಾರದು ಎಂಬ ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರ ಹೇಳಿಕೆಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ನೆಹರೂ ಅವರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ, ಏಕೆಂದರೆ ಚೀನಾ ದೇಶ ಭಾರತ ಗಡಿಯನ್ನು ಆಕ್ರಮಿಸಿದಾಗ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ನೆಹರೂ ಅವರು ಗಡಿಭಾಗವನ್ನು ಬಿಟ್ಟುಕೊಟ್ಟರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಚೀನಾ ದೇಶ ಗಡಿಪ್ರದೇಶ ಆಕ್ರಮಿಸಿಕೊಳ್ಳಲು ಬಂದಾಗ ಗಟ್ಟಿಯಾಗಿ ನಿಂತು ಆ ಪ್ರದೇಶವನ್ನು ಉಳಿಸಿಕೊಂಡವರು. ಪಾಕಿಸ್ತಾನದ ಜೊತೆಗೆ ರಾಜಿ ಮಾಡಿಕೊಳ್ಳಲಿಲ್ಲ. ಭಾರತದ ಅಖಂಡತೆ ಹಾಗೂ ಏಕತೆಗೆ ಸಾಧನೆಯನ್ನು ಮಾಡಿದ್ದಾರೆ. ಮೋದಿಯವರು ಭಾರತವನ್ನು ಶಕ್ತಿಶಾಲಿಯಾಗಿ ಮಾಡಿದ್ದಾರೆ. ಹೀಗಾಗಿ ನೆಹರೂ Nehru ಅವರೊಂದಿಗೆ ಹೋಲಿಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದರು.
Also read: ಮೇ 29ರಿಂದ ಪಂಚಾಯತ್ ಕ್ರೀಡಾ ಹಬ್ಬ-2022
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post