ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೀಟ್ ಪರೀಕ್ಷೆ NEET Exam ಬರೆಯುತ್ತಿರುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಶನಿವಾರ ಹಾಗೂ ಭಾನುವಾರ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ PM Narendra Modi ರೋಡ್ ಶೋನಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯಾದ್ಯಂತ ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. ಪೂರ್ವ ನಿಗಧಿಯಂತೆ ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ಪ್ರಧಾನಿ ಮೋದಿರ ರೋಡ್ ಆಯೋಜಿಸಲಾಗಿತ್ತು. ಆದರೆ, ಭಾನುವಾರ ನೀಟ್ ಪರೀಕ್ಷೆಯೂ ನಡೆಯಲಿದ್ದು, ರಸ್ತೆ ಬಂದ್ ಮಾಡಿದರೆ ಅಭ್ಯರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಕೇಂದ್ರಗಳಿಗೆ ಹೋಗೋದು ಹೇಗೆ ಎಂಬ ಆತಂಕದಲ್ಲಿದ್ದಾರೆ. ಹೀಗಾಗಿ ಮೋದಿ ರೋಡ್ ಶೋನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಶನಿವಾರ ಬೆಳಗ್ಗೆ 10 ಗಂಟೆಯಿಂದ 12:30 ರವರೆಗೆ ರೋಡ್ ಶೋ ನಡೆಯಲಿದೆ. ಇದು ಜೆಪಿ ನಗರ ಬ್ರಿಗೇಡ್ ಮಿಲೇನಿಯಂನಿಂದ ಮಲ್ಲೇಶ್ವರಂ ಸರ್ಕಲ್ ಮಾರಮ್ಮ ಟೆಂಪಲ್ ವರೆಗೆ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ 11:30 ರವರೆಗೆ ರೋಡ್ ಶೋ ನಡೆಯಲಿದ್ದು, ಇದು ಸುರಂಜನ್ ದಾಸ್ ಸರ್ಕಲ್ ನಿಂದ ಟ್ರಿನಿಟಿ ಸರ್ಕಲ್ ವರೆಗೆ ಸಾಗಲಿದೆ. ಮಾತ್ರವಲ್ಲದೇ ಭಾನುವಾರ ನಡೆಯುವ ರೋಡ್ ಶೋದಲ್ಲಿ 4 ಕಿ.ಮೀ ಕಡಿತ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post