ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ #Dr. D. Veerendra Heggade ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವೀಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಕೋರ್ಟ್ ಆದೇಶ ನೀಡಿದ್ದು, ಸಮೀರ್ ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಹರಿಬಿಟ್ಟಿದ್ದ ವೀಡಿಯೋ ಮಾನ್ಯ ಪ್ರಧಾನ ಸಿಟಿ ಸಿವಿಲ್ ಕೋರ್ಟ್ ಆದೇಶದನ್ವಯ ಡಿಲೀಟ್ ಆಗಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾ ಆರ್ ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಹಿಂಬಾಲಕರು ಶ್ರೀ ಕ್ಷೇತ್ರ ಧರ್ಮಸ್ಥಳ, #Shri Kshetra Dharmasthala ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಯಾವುದೇ ಸಂಸ್ಥೆಗಳ ಬಗ್ಗೆ ಮಾನಹಾನಿ ಹೇಳಿಕೆಗಳನ್ನ ನೀಡಬಾರದು ಎಂದು ಆದೇಶ ನೀಡಿತ್ತು.
Also read: ಸೇರಿದ್ದು ಹೋಟೆಲ್ ಕೆಲಸಕ್ಕೆ, ಬ್ಯಾಗ್ ನಲ್ಲಿ ಸಿಕ್ಕಿದ್ದು ಮಾತ್ರ ಸ್ಪೋಟಕ | ಆರೋಪಿ ರೆಹಮಾನ್ ಅಂದರ್

ಅಲ್ಲದೇ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಫೇಸ್ ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಹಾಗೂ ಮಾನಹಾನಿ ಹೇಳಿಕೆಗಳಿರುವಂತ ಯಾವುದೇ ವರದಿ ಮತ್ತು ಅಂಶಗಳನ್ನ ಅಪ್ಲೋಡ್ ಮಾಡದಂತೆ ಆದೇಶ ಮಾಡಿದೆ.ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಕೀಲ ಎಸ್ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post