No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಸದ ಶುಲ್ಕ ಹೆಸರಿನಲ್ಲಿ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ

kalpa News by kalpa News
May 28, 2025
in ಬೆಂಗಳೂರು ನಗರ
0
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನಲ್ಲಿ ಕಸದ ಸೆಸ್‌ಹೆಸರಿನಲ್ಲಿ ಕಾಂಗ್ರೆಸ್‌ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹಣ ಉಳಿದಿಲ್ಲ. ಹಿಂದೆ ಇದ್ದ ತುಘಲಕ್‌ಕೂಡ ಹಾಕದಷ್ಟು ತೆರಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಜನರ ಮೇಲೆ ಹಾಕಿದ್ದಾರೆ. ಕಸ ವಿಲೇವಾರಿ ಮಾಡಲು ಕೂಡ ತೆರಿಗೆ ಹಾಕಲಾಗಿದೆ. 30*40 ಅಡಿ ವಿಸ್ತೀರ್ಣದ ಮನೆಗೆ 120 ರೂ. ಇದ್ದ ಕಸದ ತೆರಿಗೆಯನ್ನು 720 ರೂ. ಮಾಡಿದ್ದಾರೆ. ಅಂದರೆ 500% ರಷ್ಟು ಹೆಚ್ಚಾಗಿದೆ. ಅಪಾರ್ಟ್‌ಮೆಂಟ್‌ನಿವಾಸಿಗಳು ಕಸವನ್ನು ಅವರೇ ವಿಲೇವಾರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಕಸದ ಸೆಸ್‌1,800 ರೂ. ನಿಂದ 18,000 ರೂ. ಗೆ ಹೆಚ್ಚಿಸಲಾಗಿದೆ ಎಂದು ದೂರಿದರು.
ಮಾಲ್‌ಗಳಲ್ಲಿ 3,600 ರೂ. ಇದ್ದ ಕಸದ ಸೆಸ್‌ 52,500 ರೂ. ಆಗಿದ್ದು, 14,483% ಹೆಚ್ಚಿದೆ. ಆಸ್ಪತ್ರೆಗಳಲ್ಲಿ ಕಸದ ಸೆಸ್‌ 9,600 ರೂ. ನಿಂದ 2,75,000 ರೂ. ಆಗಿದೆ. 50×80 ವಿಸ್ತೀರ್ಣದ ಖಾಲಿ ನಿವೇಶನಗಳಿಗೆ 600 ರೂ. ನಿಂದ 5,400 ರೂ. ಆಗಿದೆ. ಕಸವೇ ಉತ್ಪತ್ತಿ ಆಗದ ಜಾಗದಲ್ಲಿ ಬಿಬಿಎಂಪಿಯಿಂದ ದುಡ್ಡು ಉತ್ಪತ್ತಿ ಮಾಡಲಾಗುತ್ತಿದೆ ಎಂದರು.

ಜಮೀನುಗಳಿಗೆ ಬಳಕೆದಾರರ ಶುಲ್ಕ 3,600 ರೂ. ನಿಂದ 67,000 ರೂ. ಆಗಿ 1,761% ಹೆಚ್ಚಾಗಿದೆ. 110 ಹಳ್ಳಿಗಳಲ್ಲಿ ಲಕ್ಷಾಂತರ ಜಮೀನುಗಳಿವೆ. ಅವುಗಳ ಮಾಲೀಕರು ಲಕ್ಷಾಂತರ ರೂಪಾಯಿ ಕಸದ ಸೆಸ್‌ಪಾವತಿಸಬೇಕಿದೆ. ಬಳಕೆದಾರರ ಶುಲ್ಕವನ್ನು ನಾವು ಪಾವತಿಸುವುದಿಲ್ಲ ಎಂದು ಬೆಂಗಳೂರಿನ 2,800 ಜನರು ಆನ್‌ಲೈನ್‌ಆಂದೋಲನ ಆರಂಭಿಸಿದ್ದಾರೆ. ಕಾಂಗ್ರೆಸ್‌ಸರ್ಕಾರ ಬಿಬಿಎಂಪಿಯ ಮೂಲಕ ಜನರನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕಳೆದೆರಡು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಜನರು ಅತಿ ಹೆಚ್ಚು ತೆರಿಗೆ ಪಾವತಿಸುತ್ತಿದ್ದರೂ, ಅಭಿವೃದ್ಧಿಗೆ ಹಣ ನೀಡದೆ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದರು.
ನೀತಿ ಆಯೋಗದ ಸಭೆಗೆ ಗೈರು

ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆರೋಪ ಮಾಡುವ ಸಿಎಂ ಸಿದ್ದರಾಮಯ್ಯನವರು ನೀತಿ ಆಯೋಗದ ಸಭೆಗೆ ಹೋಗಿಲ್ಲ. ರಾಜಸ್ತಾನದ ಕಾಂಗ್ರೆಸ್‌ಸಭೆಗೆ, ರಾಹುಲ್‌ಗಾಂಧಿಯ ಭೇಟಿಗೆ ಅವರಿಗೆ ಸಮಯ ಇದೆ. ಆದರೆ ನೀತಿ ಆಯೋಗದ ಸಭೆಗೆ ಹೋಗಲು ಇವರಿಗೆ ಸಮಯವಿಲ್ಲ. ಅಲ್ಲಿ ಹೋಗಿ ಅನುದಾನ ಕೇಳದೆ, ಹಾದಿಬೀದಿಯಲ್ಲಿ ಆರೋಪ ಮಾಡುತ್ತಿದ್ದಾರೆ. ಕ್ರಿಕೆಟ್‌ಸ್ಟೇಡಿಯಂಗೆ ಹೋಗಿ ಸಮೋಸ, ಕಡ್ಳೆಪುರಿ ತಿನ್ನಲು ಸಮಯ ಇರುವ ಇವರಿಗೆ, ಕೇಂದ್ರ ಸರ್ಕಾರದ ಬಳಿ ಹೋಗಲು ಸಮಯ ಇಲ್ಲ ಎಂದರು.

ಪ್ರತಿ ಮುಖ್ಯಮಂತ್ರಿಗೆ ಹದಿನೈದಿಪ್ಪತ್ತು ನಿಮಿಷ ಸಮಯ ನೀಡಲಾಗುತ್ತದೆ. ಇದನ್ನು ಬಳಸಿಕೊಂಡು ರಾಜ್ಯದ ಜನರ ಪರವಾಗಿ ಮಾತಾಡಬಹುದಿತ್ತು. ಇನ್ನು ಮುಂದೆ ಅನುದಾನ ನೀಡಿಲ್ಲ ಎಂದು ದೂರಿದರೆ ಇವರನ್ನು ನಂಬಲೇಬಾರದು. ಇವರಿಗೆ ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲ ಎಂದರು.
ರಾಜ್ಯದ ವಿವಿಧೆಡೆ ಮಳೆ ಹಾನಿಯಾಗಿದ್ದು, ಒಬ್ಬ ಸಚಿವರೂ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಯಾವುದೇ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಕ್ಕೆ ಹೋಗಿಲ್ಲ. ಬೆಂಗಳೂರಿನಲ್ಲಿ ಸರ್ಕಾರದಿಂದ ಪರಿಶೀಲನೆ ನಡೆಸಿದ ನಂತರ ಒಂದು ರೂಪಾಯಿ ಪರಿಹಾರ ಬಿಡುಗಡೆ ಮಾಡಿಲ್ಲ. ಸಿಲ್ಕ್‌ಬೋರ್ಡ್‌ವೃತ್ತದ ಅಭಿವೃದ್ಧಿಗೂ ಅನುದಾನ ನೀಡಿಲ್ಲ. ಬೆಳೆ ಹಾನಿಯಾದ ರೈತರಿಗೆ ಸಾಂತ್ವನ ಹೇಳಲು ಸಚಿವರು ಮುಂದಾಗಿಲ್ಲ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಚಿವರು ಭೇಟಿ ನೀಡಬೇಕು. ಸಿಎಂ ಸಿದ್ದರಾಮಯ್ಯ ಎಲ್ಲ ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಹಾರ ಕಾರ್ಯಾಚರಣೆ ನಡೆಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ವಿರೋಧ ಪಕ್ಷವನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಸರ್ಕಾರ ಅಕ್ರಮಗಳನ್ನು ಇನ್ನಷ್ಟು ಬಯಲಿಗೆ ಎಳೆಯುತ್ತೇವೆ. ನಾವು ಬಿಡುಗಡೆ ಮಾಡಿದ ಚಾರ್ಜ್‌ಶೀಟ್‌ಪುಸ್ತಕದಿಂದಾಗಿ ಸರ್ಕಾರ ಭಯ ಬಿದ್ದಿದೆ ಎಂದರು.
ಕೋವಿಡ್‌ನಿಯಂತ್ರಣಕ್ಕೆ ಕ್ರಮ ವಹಿಸಿ

ರಾಜ್ಯದಲ್ಲಿ ಕೋವಿಡ್‌ಮತ್ತೆ ಹರಡುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಅಲೆಸುತ್ತಾರೆ. ಆದ್ದರಿಂದ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್‌ವಾರ್ಡ್‌ಆರಂಭಿಸಿ, ಔಷಧಿ ಪೂರೈಸಬೇಕು. ಯಾವುದೇ ಖರ್ಚನ್ನು ರೋಗಿಗಳಿಂದ ಭರಿಸಬಾರದು. ಸರ್ಕಾರವೇ ಪೂರ್ತಿ ವೆಚ್ಚ ಭರಿಸಬೇಕು ಎಂದು ಆರ್.ಅಶೋಕ ಒತ್ತಾಯಿಸಿದರು.

ಮಂಡ್ಯದಲ್ಲಿ ಸಾರಿಗೆ ಇಲಾಖೆಯ ಪೊಲೀಸರ ನಿರ್ಲಕ್ಷ್ಯದಿಂದಾಗಿ ಮಗು ಮೃತಪಟ್ಟಿದೆ. ಇದು ಪೊಲೀಸ್‌ಇಲಾಖೆಯಲ್ಲಿ ಶಿಸ್ತಿಲ್ಲ ಎಂಬುದಕ್ಕೆ ಸಾಕ್ಷಿ. ಪೊಲೀಸರ ಬಳಿ ವಾಕಿಟಾಕಿ ಇದೆ. ಆದರೂ ಏಕಾಏಕಿ ಹೋಗಿ ರಸ್ತೆಯಲ್ಲಿ ಸವಾರರನ್ನು ಅಡ್ಡ ಹಾಕುತ್ತಾರೆ. ಸಾರಿಗೆ ಇಲಾಖೆಯ ಪೊಲೀಸರು ಜನರನ್ನು ಹೊಡೆಯಲು ಅವಕಾಶವಿಲ್ಲ. ಮಗು ಪೊಲೀಸರಿಂದಲೇ ಸತ್ತಿರುವುದರಿಂದ ಆ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR Ashokಆರ್. ಅಶೋಕಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೆಹರು ಅವರು ಆಧುನಿಕ ಭಾರತದ ನಿರ್ಮಾತೃ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮೈಸೂರಿನ ಶ್ರೀ ಸಪ್ತಮಾತೃಕಾ ಚೌಡೇಶ್ವರಿ ಸನ್ನಿಧಿಗೆ 20ರ ಸಂಭ್ರಮ | ಶಕ್ತಿ ಪೀಠದಲ್ಲಿ ಸಾಮಾಜಿಕ ಕಳಕಳಿ

kalpa News

kalpa News

Next Post
ಮೈಸೂರಿನ ಶ್ರೀ ಸಪ್ತಮಾತೃಕಾ ಚೌಡೇಶ್ವರಿ ಸನ್ನಿಧಿಗೆ 20ರ ಸಂಭ್ರಮ | ಶಕ್ತಿ ಪೀಠದಲ್ಲಿ ಸಾಮಾಜಿಕ ಕಳಕಳಿ

ಮೈಸೂರಿನ ಶ್ರೀ ಸಪ್ತಮಾತೃಕಾ ಚೌಡೇಶ್ವರಿ ಸನ್ನಿಧಿಗೆ 20ರ ಸಂಭ್ರಮ | ಶಕ್ತಿ ಪೀಠದಲ್ಲಿ ಸಾಮಾಜಿಕ ಕಳಕಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL