No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ: ಡಿಸಿಎಂ ಶಿವಕುಮಾರ್

kalpa News by kalpa News
September 6, 2023
in ಬೆಂಗಳೂರು ನಗರ
0
ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ: ಡಿಸಿಎಂ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

“ಕರ್ನಾಟಕ ಕೇವಲ ಉದ್ಯೋಗಿಗಳು, ಕೆಲಸಗಾರರನ್ನು ಎದುರು ನೋಡುತ್ತಿಲ್ಲ, ಉದ್ಯೋಗ ಸೃಷ್ಟಿ ಮಾಡುವವರನ್ನು ಎದುರು ನೋಡುತ್ತಿದೆ. ಇದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿ ನಮ್ಮ ರಾಜ್ಯವು ಉದ್ಯೋಗದಾತರ ತವರು ಆಗುವುದರಲ್ಲಿ ಸಂಶಯವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DKShivakumar ಅವರು ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕರ್ನಾಟಕ ಟೆಕ್ ಸಮ್ಮಿಟ್ ನಲ್ಲಿ Karnataka Tech Summit ಭಾಗವಹಿಸಿ ಮಾತನಾಡಿ, “ಸಶಕ್ತ ಹಾಗೂ ಸದೃಢ ಸರ್ಕಾರ ಈಗ ಕರ್ನಾಟಕದಲ್ಲಿದೆ. ಭಾರತವನ್ನು ಕರ್ನಾಟಕದ ಮೂಲಕ ನೋಡಲಾಗುತ್ತಿದೆ. ಕರ್ನಾಟಕ ಅತ್ಯಂತ ಸಮರ್ಥವಾದ ಮಾನವ ಸಂಪನ್ಮೂಲವನ್ನು ಹೊಂದಿದೆ. ನಿಮ್ಮೆಲ್ಲರ ಸಹಕಾರ ಇದ್ದರೆ ನಾವು ಕಳೆದುಕೊಂಡಿರುವ ಘನತೆಯನ್ನು ಮರಳಿ ತರುತ್ತೇವೆ. ಆ ಜವಾಬ್ದಾರಿ ನಮ್ಮದು ಎಂದರು.
ಬೆಂಗಳೂರು ಹೊರತುಪಡಿಸಿ ಇತರೆಡೆ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಮಹತ್ವವನ್ನು ನಮ್ಮ ಸರ್ಕಾರ ನೀಡಲಿದೆ. ಈ ವಿಚಾರ ನಮ್ಮ ಪ್ರಣಾಳಿಕೆಯಲ್ಲೂ ಉಲ್ಲೇಖಿಸಿದ್ದೇವೆ. ಹೆಚ್ಚಿನ ಉದ್ಯೋಗ ಸೃಷ್ಟಿ ಮಾಡುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ, ನೀವು ಹೆಚ್ಚಿನ ಶಕ್ತಿಯನ್ನು ಸರ್ಕಾರಕ್ಕೆ ನೀಡಬೇಕು ಎಂದರು.

100 ದಿನಗಳಲ್ಲಿ ನಾವು ನೀಡಿದ ಪ್ರಮುಖ ವಾಗ್ದಾನಗಳನ್ನು ಈಡೇರಿಸಿದ್ದೇವೆ. ಮುಂದಿನ 100 ದಿನಗಳಲ್ಲಿ ಯಾವ, ಯಾವ ಯೋಜನೆಗಳನ್ನು ಜಾರಿಗೆ ತರಬೇಕು ಎನ್ನುವ ಯೋಜನೆ ಹಾಕಿಕೊಂಡಿದ್ದೇವೆ. 100 ದಿನಗಳಲ್ಲಿ ಸಾಕಷ್ಟು ಮಂದಿ ಉದ್ಯಮಿಗಳನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಬಗ್ಗೆ ಚರ್ಚೆ ಮಾಡಲಾಗುವುದು. ನಮ್ಮ ರಾಜ್ಯ ಎಲ್ಲ ರಂಗಳಲ್ಲಿಯೂ ಮುಂಚೂಣಿಯಲ್ಲಿ ಇರಬೇಕು ಎಂಬುದು ನಮ್ಮ ಅಭಿಲಾಷೆ ಎಂದರು.
ಬೆಂಗಳೂರು ವೈವಿದ್ಯತೆಯಲ್ಲಿ ಏಕತೆ ಹೊಂದಿರುವ, ಅತ್ಯಂತ ಸುರಕ್ಷಿತ, ಆರೋಗ್ಯಯುತವಾದ ನಗರ. ರಾಜ್ಯದ ಜನಸಂಖ್ಯೆಯ ಶೇ 34 ರಷ್ಟು ಜನಸಂಖ್ಯೆ ರಾಜ್ಯ ರಾಜಧಾನಿಯಲ್ಲೇ ಇದೆ, ಬ್ರಾಂಡ್ ಬೆಂಗಳೂರಿನ ಘನತೆ ಹೆಚ್ಚಿಸಲು ಸುಮಾರು 80 ಸಾವಿರಕ್ಕೂ ಹೆಚ್ಚು ಸಲಹೆಗಳನ್ನು ನಮ್ಮ ಜನರು ನೀಡಿದ್ದಾರೆ ಎಂದರು.

Also read: ಪತ್ರಿಕಾ ವಿತರಕರಿಗೆ 2 ಕೋಟಿ ಕ್ಷೇಮ ನಿಧಿ: ಕೆ.ವಿ. ಪ್ರಭಾಕರ್

ಬೆಂಗಳೂರು ಪ್ರಸ್ತುತ ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದೆ. ಸಮಯ ಅತ್ಯಂತ ಅಮೂಲ್ಯವಾದುದು. ಈ ವಿಚಾರವಾಗಿ ಕೆಲವೇ ದಿನಗಳಲ್ಲಿ ಯೋಜನೆಯನ್ನು ಪ್ರಸ್ತುತ ಪಡಿಸುತ್ತೇವೆ. ಏಕೆಂದರೆ ತಕ್ಷಣಕ್ಕೆ ಸಮಾಧಾನಕ್ಕೆ ಏನಾದರೂ ಹೇಳಬಹುದು ಆದರೆ “ನುಡಿದಂತೆ ನಡೆಯುವ” ನಾವು ಸುಮ್ಮನೆ ಭರವಸೆ ನೀಡಬಾರದು.
2013-18ರ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಇಂಧನ ಸಚಿವನಾದಾಗ ರಾಜ್ಯದಲ್ಲಿ 10 ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡುತಿತ್ತು. ಸರ್ಕಾರದ ಅವಧಿ ಮುಗಿಯುವ ಹೊತ್ತಿಗೆ ಅದನ್ನು 23 ಸಾವಿರ ಮೆ.ವ್ಯಾಟ್ ಗೆ ಏರಿಕೆ ಮಾಡಿದ್ದೆವು. ಇಡೀ ಏಷ್ಯಾದಲ್ಲಿಯೆ ಅತ್ಯಂತ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿದೆವು, ಈ ಯೋಜನೆಗೆ ಒಂದಿಂಚೂ ಭೂಮಿಯನ್ನೂ ನಾವು ವಶಪಡಿಸಿಕೊಳ್ಳದೆ ಸಾಕಾರಗೊಳಿಸಿದೆವು.

ಹೊಸ ಐಟಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಯೋಚನೆಯಲ್ಲಿದ್ದು ಹೆಚ್ಚಿನ ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ, ಕೇವಲ ಇದೊಂದೆ ಕ್ಷೇತ್ರಕ್ಕೆ ನಾವು ಗಮನ ಹರಿಸುತ್ತಿಲ್ಲ. ಪ್ರಾಥಮಿಕ ಶಿಕ್ಷಣ, ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತುದಿಗಾಲಲ್ಲಿ ನಿಂತಿದ್ದೇವೆ. ಕರ್ನಾಟಕದ ಬೆಳವಣಿಗೆಗೆ ನಿಮ್ಮೆಲ್ಲರ ಸಹಕಾರವಿರಲಿ.” ಎಂದು ಮನವಿ ಮಾಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಿಕಾ ವಿತರಕರಿಗೆ 2 ಕೋಟಿ ಕ್ಷೇಮ ನಿಧಿ: ಕೆ.ವಿ. ಪ್ರಭಾಕರ್

Next Post

ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ: ಬಿ. ಕೃಷ್ಣಪ್ಪ ಕಿವಿಮಾತು

kalpa News

kalpa News

Next Post
ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ: ಬಿ. ಕೃಷ್ಣಪ್ಪ ಕಿವಿಮಾತು

ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ: ಬಿ. ಕೃಷ್ಣಪ್ಪ ಕಿವಿಮಾತು

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL