No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ: ಸಚಿವ ಯೋಗೇಶ್ವರ

kalpa News by kalpa News
July 6, 2021
in ಬೆಂಗಳೂರು ನಗರ
0
ಮುಖ್ಯಮಂತ್ರಿ ಹುದ್ದೆ ಅಂಬಾರಿ ಹೊರುವ ಆನೆಯಿದ್ದಂತೆ: ಸಚಿವ ಯೋಗೇಶ್ವರ್

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯ ಮಟ್ಟದ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಸಚಿವ ಸಿ.ಪಿ.ಯೋಗೇಶ್ವರ ಹೇಳಿದ್ದಾರೆ.

ಗಣಿಗಾರಿಕೆ, ಕೈಗಾರಿಕೆ, ನಿರ್ಮಾಣ ಕ್ಷೇತ್ರ ಹಾಗೂ ಔಷಧಿ ಉತ್ಪಾದನಾ ಕಂಪನಿಗಳು ಸೇರಿದಂತೆ ವಿವಿಧ ರೀತಿಯ ಕೈಗಾರಿಕೆಗಳಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ಮಟ್ಟದ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ ನೀಡಬೇಕೆಂದು ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಎ ವರ್ಗದ ಯೋಜನೆಗಳು ಹಾಗೂ ಚಟುವಟಿಕೆಗಳು ಕೇಂದ್ರ ಸರ್ಕಾರದ ಅಧಿಕಾರದ ವ್ಯಾಪ್ತಿಗೆ ಬರುತ್ತವೆ. ಬಿ ವರ್ಗದ ಯೋಜನೆಗಳು ಹಾಗೂ ಚಟುವಟಿಕೆಗಳು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ನಾವು ಹೊಸದಾಗಿ ಸ್ಥಾಪಿಸುವ ಉದ್ಯಮಿಗಳಿಗೆ ಕೇವಲ ಪರಿಸರ ವಿಮೋಚನಾ ಪತ್ರ (Environment Clearance) ನೀಡಿ ಅನುಮತಿ ನೀಡುತ್ತೇವೆ. ನಾವು ಅನುಮತಿ ನೀಡಿದ ನಂತರ ಕೈಗಾರಿಕೆಗಳು ಪರಿಸರ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸುವ ಬಗ್ಗೆ ಪರಿಶೀಲನೆ ಮಾಡುತ್ತಿಲ್ಲ. ನಮಗೆ ಅದರ ಮೇಲೆ ನಿಯಂತ್ರಣ ಸಹ ಇಲ್ಲ. ಹೀಗಾಗಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಧ್ಯೆ ಪ್ರವೇಶಿಸಿ ಹಲವಾರು ಚಟುವಟಿಕೆಗಳನ್ನು ನಿಲ್ಲಿಸಿದೆ. ಇನ್ನು ಮುಂದೆ ಬಿ ವರ್ಗದ ಚಟುವಟಿಕೆಗಳ ಮೇಲೆ ನಿಯಂತ್ರಣವಿಡಲು ಹಾಗೂ ಪರಿಶೀಲನೆ ಮಾಡಲು ಪ್ರಸ್ತಾವನೆ ಕಳುಹಿಸಿ ಎಂದು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಪರಿಸರ ಮಾಲಿನ್ಯ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷರಾದ ಸಾಸ್ವತಿ ಮಿಶ್ರಾ ಅವರಿಗೆ ಸೂಚಿಸಿದರು.

ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆ.ಐ.ಡಿ.ಬಿ.) ಪ್ರದೇಶದಲ್ಲಿ ಸಹ ಕೈಗಾರಿಕೆಗಳು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸುತ್ತಿಲ್ಲ ಅಪಾರವಾದ ವಾಯು ಹಾಗೂ ಜಲಮಾಲಿನ್ಯವಾಗುತ್ತಿದ್ದು, ಪರಿಸರಕ್ಕೆ ತುಂಬಾ ಧಕ್ಕೆ ಉಂಟಾಗುತ್ತಿದೆ. ಕೆರೆ, ನದಿ ಹಾಗೂ ಸಮುದ್ರದಲ್ಲೂ ವಿಷಕಾರಕ ಅಂಶಗಳು ಸೇರುತ್ತಿದ್ದು, ಜಲಮೂಲಗಳು ಕಲುಷಿತಗೊಳ್ಳುತ್ತಿವೆ. ಕೆ.ಐ.ಡಿ.ಬಿ. ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದ್ದರೂ ಸಹ ಪರಿಸರ ಸಂರಕ್ಷಣಾ ನಿಯಮಗಳನ್ನು ಪಾಲಿಸಲೇಬೇಕು. ಇಲ್ಲವಾದಲ್ಲಿ, ಪರಿಸರ ಮಾಲಿನ್ಯಕ್ಕೆ ಸರ್ಕಾರಿ ಸಂಸ್ಥೆ ಹೊಣೆಯಾದರೆ ಇತರೆ ಕೈಗಾರಿಕೆಗಳನ್ನು ನಾವು ನಿಯಂತ್ರಿಸುವುದು ಹೇಗೆ ಎಂದು ಸಮಿತಿ ಹಾಗೂ ಪ್ರಾಧಿಕಾರದ ಸದಸ್ಯರುಗಳನ್ನು ಪ್ರಶ್ನಿಸಿದರು. ಬಿ-1 ಮತ್ತು ಬಿ-2 ವರ್ಗದ ಕೈಗಾರಿಕೆಗಳು ಯಾವುದೇ ರೀತಿಯಲ್ಲೂ ಪರಿಸರ ಮಾಲಿನ್ಯ ಮಾಡದಂತೆ ಅವುಗಳ ಮೇಲೆ ನಮ್ಮ ಹತೋಟಿ ಇರಬೇಕು ಹಾಗೂ ಅವರು ನಮ್ಮ ನಿಯಂತ್ರಣದಲ್ಲಿರುವಂತೆ ಸಮರ್ಪಕವಾದ ಆದೇಶ ಹೊರಡಿಸಲು ಪ್ರಸ್ತಾವನೆ ಕಳುಹಿಸಿ ಎಂದು ಸಚಿವರು ಸೂಚಿಸಿದರು.

ಪ್ರಸಕ್ತ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಹಾಗೂ ತಜ್ಞರ ಸಮಿತಿ ಮುಂದೆ ಗಣಿಗಾರಿಕೆಗೆ ಸಂಬಂಧಿಸಿದ 78 ಕಡತಗಳು ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದ 34 ಹಾಗೂ ಕೈಗಾರಿಕೆಗಳಿಗೆ ಸಂಬಂಧಿಸಿದ 2 ಕಡತಗಳು ಬಾಕಿ ಇದ್ದು, ಈ ತಿಂಗಳು 23 ಹಾಗೂ 24ರಂದು ಸಭೆ ಏರ್ಪಡಿಸಿದ್ದು, ಕಡತಗಳನ್ನು ಇತ್ಯರ್ಥ ಪಡಿಸುವುದಾಗಿ ಸದಸ್ಯರುಗಳು ತಿಳಿಸಿದರು.

ಹಲವಾರು ಶಾಸಕರು ಹಾಗೂ ಸಚಿವರುಗಳು ತಮ್ಮ ಕಡತಗಳು ವಿಲೇವಾರಿ ಆಗುತ್ತಿಲ್ಲವೆಂದು ನನ್ನ ಮೇಲೆ ಒತ್ತಡವೇರುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಕಡತಗಳನ್ನು ವಿಲೇವಾರಿ ಮಾಡಿ ಎಂದು ಸದಸ್ಯರುಗಳಿಗೆ ಸಚಿವರು ತಾಕೀತು ಮಾಡಿದರು.

ಗಣಿಗಾರಿಕೆ, ನಿರ್ಮಾಣ ಕ್ಷೇತ್ರ ಹಾಗೂ ಉದ್ಯಮಿಗಳು ಸಮಾಲೋಚಕರ ಮೂಲಕ ಪರಿಸರ ಮಾಲಿನ್ಯ ಮೌಲ್ಯ ಮಾಪನ ಪ್ರಾಧಿಕಾರ ಹಾಗೂ ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಅರ್ಜಿಗಳನ್ನು ಸಲ್ಲಿಸುತ್ತಾರೆ. ಪ್ರಾಧಿಕಾರ ಹಾಗೂ ಸಮಿತಿಯ ಕೆಲವು ಸದಸ್ಯರು ಸಮಾಲೋಚಕರಾಗಿದ್ದಾರೆ ಎಂಬ ದೂರುಗಳು ಸಹ ಬಂದಿವೆ. ನಮ್ಮ ಸದಸ್ಯರುಗಳು ಸಮಾಲೋಚಕರಾಗಿ ಕಾರ್ಯನಿರ್ವಹಿಸುವಂತೆ ಇಲ್ಲ ಎಂದು ಇದೇ ವೇಳೆ ಸಚಿವರು ಎಚ್ಚರಿಕೆ ನೀಡಿದರು.

ಔಷಧಿ ಉತ್ಪಾದನಾ ಕಾರ್ಖಾನೆಗಳಲ್ಲಿ ಅತೀ ಹೆಚ್ಚಿನ ರಾಸಾಯನಿಕಗಳನ್ನು ಬಳಸುತ್ತಾರೆ. ಅದರಿಂದ, ಪರಿಸರದ ಮೇಲೆ ಭಾರಿ ದುಷ್ಪರಿಣಾಮವಾಗುತ್ತಿದೆ. ಇದನ್ನು ನಿಯಂತ್ರಿಸಬೇಕೆಂದು ಕೆಲವು ಸದಸ್ಯರು ಸಚಿವರಿಗೆ ಸಲಹೆ ನೀಡಿದರು.

ಇನ್ನು ಮುಂದೆ ತಾವೇ ಖುದ್ದಾಗಿ ಕೈಗಾರಿಕೆ ಪ್ರದೇಶಗಳಿಗೆ, ಗಣಿಗಾರಿಕೆ ಪ್ರದೇಶಗಳಿಗೆ, ಔಷಧಿ ಉತ್ಪಾದನೆ ಹಾಗೂ ಇತರ ಉತ್ಪಾದನಾ ಕ್ಷೇತ್ರದ ವಲಯಗಳಿಗೆ ಭೇಟಿ ನೀಡಿ ಪರಿಸರ ಮಾಲಿನ್ಯದ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಚಿವ ಯೋಗೇಶ್ವರ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister YogishwarNews in KannadaNews KannadaState Newsಬೆಂಗಳೂರುಸಚಿವ ಸಿ.ಪಿ.ಯೋಗೇಶ್ವರ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಬರುವ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ: ಸಿದ್ದರಾಮಯ್ಯ

Next Post

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು…

kalpa News

kalpa News

Next Post
ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು…

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು...

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL