ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಸ್ಟೆಲ್ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ #Nursing student sick ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸ್ಟ್ರೇ ಮಾಡುತ್ತಿದ್ದರು. ಇಲಿ ಪಾಷಾಣದ ವಾಸನೆಯಿಂದ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
Also read: ಶೃಂಗೇರಿ ಶಕ್ತಿ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ | ಅಭಿಯಾನಕ್ಕೆ ಮತ್ತಷ್ಟು ಬಲ
ವಾಂತಿ ಮಾಡಿಕೊಂಡು ಅಸ್ವಸ್ಥರಾದ 20ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸ್ಟೆಲ್ ಸಿಬ್ಬಂದಿ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ.
ಸದ್ಯ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್ ಸಿಬ್ಬಂದಿ ಮಂಜುನಾಥ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post