ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ತನಿಖೆ ಮುಕ್ತಾಯ ಹಂತಕ್ಕೆ ಬಂದಿದ್ದು, ನಟ ದರ್ಶನ್ #Actor Darshan ಅವರನ್ನು ಎ1 ಆರೋಪಿಯನ್ನಾಗಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಆರೋಪಿಗಳ ವಿವರವನ್ನು ಉಲ್ಲೇಖಿಸುವಾಗ ದರ್ಶನ್ ಅವರನ್ನು ಎ1 ಎಂದು ಪೊಲೀಸರು ಉಲ್ಲೇಖಿಸಲಿದ್ದಾರೆ ಎನ್ನಲಾಗಿದೆ.
Also read: ತೀರ್ಥಹಳ್ಳಿ | ಲೈಂಗಿಕ ಕಿರುಕುಳ ಆರೋಪ | ಶಿಕ್ಷಕನ ಬಂಧನ

ಪಟ್ಟಣಗೆರೆ ಶೆಡ್‍ನಲ್ಲಿ ರೇಣುಕಾಸ್ವಾಮಿ ರಕ್ತಸಿಕ್ತವಾಗಿ ಬಿದ್ದಿರುವ ಭಾವಚಿತ್ರಗಳು ದರ್ಶನ್ ಸ್ನೇಹಿತ ಪ್ರದೂಷ್ ಮೊಬೈಲ್‍ನಲ್ಲಿ ಪತ್ತೆಯಾಗಿವೆ. ಹತ್ಯೆ ಕೃತ್ಯದ ಬಳಿಕ ಮೊಬೈಲ್‍ನಲ್ಲಿದ್ದ ಫೋಟೋಗಳನ್ನು ಪ್ರದೂಷ್ ಡಿಲೀಟ್ ಮಾಡಿದ್ದ. ಆದರೆ ಆತನ ಮೊಬೈಲ್ ರಿಟ್ರೀವ್ ಮಾಡಿದಾಗ ರೇಣುಕಾಸ್ವಾಮಿಯ ರಕ್ತಸಿಕ್ತ ಮೂರು ಫೋಟೋಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post