ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಡೆಂಗ್ಯೂ #Dengue ರೋಗ ವ್ಯಾಪಕವಾಗಿ ಹರಡುತ್ತಿದ್ದು ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಣ ಮಾಡಲು ಸರ್ಕಾರ ಮಸ್ಕಿಟೋ ರೆಪಲೆಂಟ್ ಗಳನ್ನು ವಿತರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಅವರಿಗೆ ಸಲಹೆ ನೀಡಿದರು
ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಮಾತನಾಡಿ, ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹಾಗೂ ಸಾವುಗಳು ಹೆಚ್ಚಾಗುತ್ತಿದೆ. ಆದರೆ ಆರೋಗ್ಯ ಇಲಾಖೆ ನೀಡುತ್ತಿರುವ ವರದಿಗಳಲ್ಲಿ ತಪ್ಪಾಗಿ ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಈ ವೇಳೆ ಡೆಂಗ್ಯು ಬಂದಂತಹ ವ್ಯಕ್ತಿಗೆ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚತ್ತದೆಯೋ ಆ ಸೊಳ್ಳೆಗೂ ಸೋಂಕು ತಗುಲುತ್ತದೆ ಆ ಸೊಳ್ಳೆಯು 10 ದಿನಗಳವರೆಗೂ ಯಾವ ಯಾವ ವ್ಯಕ್ತಿಗೆ ಕಚ್ಚುತ್ತದೆಯೋ ಎಲ್ಲರಿಗೂ ಸೋಂಕು ಹರಡುತ್ತದೆ ಎಂದು ವಿಷಯ ಪ್ರಸ್ತಾಪಿಸಿದಾಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೌದ ಎಂದು ಉದ್ಘರಿಸಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು. ಆಗ ವಿಧಾನ ಪರಿಷತ್ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಡಾ.ಸರ್ಜಿ ಅವರು ಹೇಳಿರುವುದು ಸರಿ ಇದೆ ಎಂದು ಧ್ವನಿಗೂಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









Discussion about this post