ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಾನೇ ಹೆತ್ತ ಇಬ್ಬರು ಮಕ್ಕಳನ್ನು ಕೊಂದು, ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ, ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ.
ಮೃತರನ್ನು, ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್, ವಿಜಯಕ್ಷ್ಮಿ ಮದುವೆಯಾಗಿ ಐದು ವರ್ಷವಾಗಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪತಿ ರಮೇಶ್ ಎನ್ನುವವರು ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಸಾವಿನ ಬಗ್ಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post