ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿರುವ ಪೊಲೀಸ್ ಇಲಾಖೆ #Police department ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಮಾತ್ರವಲ್ಲ ಜೈಲು ಶಿಕ್ಷೆಯನ್ನೂ ಸಹ ವಿಧಿಸಲು ಇರುವ ಅವಕಾಶವನ್ನು ತೆರೆದಿದೆ.
ರಾಜ್ಯದಾದ್ಯಂತ ಗಂಟೆ 130 ಕಿಮೀಗಿಂತಲೂ ಅಧಿಕ ವೇಗದಲ್ಲಿ ವಾಹನ ಚಾಲನೆ ಮಾಡಿದರೆ, ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಲಿದೆ.
Also read: ಪ್ಯಾರಿಸ್ ಒಲಿಂಪಿಕ್ಸ್ | ಭಾರತಕ್ಕೆ ಮತ್ತೊಂದು ಪದಕ | ಕೀರ್ತಿ ಪತಾಕೆ ಹಾರಿಸಿದ ಸ್ವಪ್ನಿಲ್ ಕುಶಾಲೆ

ಅಷ್ಟೇ ಅಲ್ಲದೇ ಡ್ರೈವಿಂಗ್ ಲೈಸೆನ್ಸ್ ರದ್ದಿಗೂ ಕೂಡ ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರಕ್ಕೆ ಪೊಲೀಸರು ಪತ್ರ ಬರೆಯಲಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನ್ ಸ್ಪೀಡ್ ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇವುಗಳು ಸೆರೆ ಹಿಡಿದ ಚಿತ್ರಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post