ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸಂಸದ ಪ್ರತಾಪ್ ಸಿಂಹ MP Prathap Simha ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ್ದಾರೆ.
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ. 1/2
— Pratap Simha (@mepratap) May 18, 2023
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಸಂಸದರು ತಿಳಿಸಿದ್ದಾರೆ.
Also read: ವಿಚಾರಣಾಧೀನ ಖೈದಿಯಿಂದ ಕಾರಾಗೃಹ ಸಿಬ್ಬಂದಿಗೆ ಜೀವಬೆದರಿಕೆ ಹಿನ್ನೆಲೆ: ದೂರು ದಾಖಲು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post