ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಸರ್ಕಾರ ಅನುಮತಿ ನೀಡಿರುವ ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆಗಳನ್ನು MSIL Liquor shop ತಕ್ಷಣವೇ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ Minister Gopalaiah ವಿಧಾನಸಭೆಗಿಂದು ತಿಳಿಸಿದರು.
Also read: ಸಾಗರ: ಮರಕ್ಕೆ ಕಾರು ಡಿಕ್ಕಿ – ಓರ್ವ ಸಾವು
ಪ್ರಶ್ನೋತ್ತರ ಕಲಾಪದ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಅನುಮತಿ ನೀಡಿರುವ ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆಗಳನ್ನು ತಕ್ಷಣವೇ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಮಳಿಗೆಗಳ ಆರಂಭ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ಈಗಾಗಲೇ ಅನುಮತಿ ನೀಡಿರುವಂತೆ ಮಳಿಗೆಗಳನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post