ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಡಾ ಪ್ರಕರಣದಲ್ಲಿ #MUDA Scam ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ #CM Sissaramaiah ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು #Lokayuktha Police ಬಿ ರಿಪೋರ್ಟ್ ಸಲ್ಲಿಸಿದ್ದು, ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also read: ಬೆಂಗಳೂರು | ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಸದ್ಯ ಅಂತಿಮ ವರದಿ ಸಲ್ಲಿಕೆಯಾದರೂ ಪ್ರಕರಣದ ತನಿಖೆ ಮುಂದುವರೆಯಲಿದೆ. ಕ್ಲೀನ್ ಚಿಟ್ ನೀಡಿದ ನಾಲ್ವರನ್ನು ಹೊರತುಪಡಿಸಿ ಉಳಿದವರ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಲಿದ್ದಾರೆ.











Discussion about this post