ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (#MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರದ ಮೇಲೆ ರಾಜ್ಯಪಾಲರು ಅನುಮತಿ ನೀಡಿದ್ದು, ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಕಾಣುತ್ತಿದೆ.
Also read: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಸಮಾಲೋಚನೆ
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ #Governer Thawarchand Gehlot ಅವರು ಇಬ್ಬರು ಕಾರ್ಯಕರ್ತರಿಂದ ದೂರುಗಳನ್ನು ಸ್ವೀಕರಿಸಿದ್ದಾರೆ, ಒಂದನ್ನು ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಹಾಂ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ದೂರನ್ನು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯನವರು ಎಷ್ಟೇ ಸಮರ್ಥಿಸಿಕೊಂಡರೂ, ಕಾನೂನುಬದ್ಧವಾಗಿಯೇ ಪಡೆದಿದ್ದೇನೆ ಎಂದು ಹೇಳಿದರೂ ಕೂಡ ಮುಡಾದಿಂದ ಅವರ ಪತ್ನಿಗೆ ಹಂಚಿಕೆಯಾದ 14 ನಿವೇಶನಗಳಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಸ್ಪಷ್ಟವಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post