ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ #CM Siddaramaiah ಹೈಕೋರ್ಟ್ ಆಘಾತ ನೀಡಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮುಡಾ ಹಗರಣದಲ್ಲಿ #Muda Scam ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ.
Also read: ರಾಜ್ಯ ಸರಕಾರದ ವೈಫಲ್ಯ, ಹಗರಣದ ಬಗ್ಗೆ ಜನ ಜಾಗೃತಿ: ನಿಖಿಲ್ ಕುಮಾರಸ್ವಾಮಿ
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ 17ಎ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. 17 ಎ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post