ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಕರ್ನಾಟಕದ ಮುಧೋಳ ನಗರವು ಪ್ರಶಸ್ತಿ ಪಡೆದಿದ್ದು ಇದಕ್ಕಾಗಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಭಾರತದ ಕಸಮುಕ್ತ ನಗರ ಎಂಬ ಹೆಮ್ಮೆಗೆ ಪಾತ್ರವಾಗಿರುವ ಮುಧೋಳ ನಗರದ ನಾಗರಿಕರು, ನಗರ ಸಭೆಯ ಸ್ವಚ್ಛತಾ ಸಿಬ್ಬಂದಿಗಳು, ಅಧಿಕಾರಿಗಳು, ಇದಕ್ಕಾಗಿ ಮಾರ್ಗದರ್ಶನ ಮಾಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರನ್ನು ಸಚಿವರು ಅಭಿನಂದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನವೆಂಬರ್ 20 ಶನಿವಾರದಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಸ್ವಚ್ಛ ಅಮೃತ ಮಹೋತ್ಸವ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀ ರಾಮನಾಥ್ ಕೋವಿಂದ್ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post