ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಮೂರು ದಿನಗಳ ಹಿಂದೆ ಪತ್ತೆಯಾಗಿದ್ದ ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ ಎಂಬ ಸಂಶಯದ ಆಧಾರದಲ್ಲಿ ನಟ ದರ್ಶನ್ #Actor Darshan ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದ್ದಾರೆ.
ಮಹತ್ವದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜೂನ್ 9ರಂದು ಮುಂಜಾನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ನಮ್ಮ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದು, ಮೃತ ವ್ಯಕ್ತಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ(33) ಎಂದು ತಿಳಿದುಬಂದಿದೆ ಎಂದಿದ್ದಾರೆ.
Also read: ಮಲಾವಿ ಉಪಾಧ್ಯಕ್ಷರಿದ್ದ ವಿಮಾನ ನಾಪತ್ತೆ | ಪತ್ತೆ ಕಾರ್ಯ ಆರಂಭ

ಪ್ರಮುಖವಾಗಿ ಪ್ರಾಥಮಿಕ ತನಿಖೆಯ ವೇಳೆ ದೊರೆತ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ಮೈಸೂರಿನಲ್ಲಿ ದರ್ಶನ್ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಾಗಿದೆ. ದರ್ಶನ್ ಸೇರಿದಂತೆ ಅವರ ಸಹಚರರನ್ನು ವಶಕ್ಕೆ ಪಡೆದು, ಪ್ರಶ್ನಿಸಲಾಗುತ್ತಿದೆ. ಪ್ರಕರಣ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈಗಲೇ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post