ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ #Actor Darshan ಬೆನ್ನಲ್ಲೇ ಪವಿತ್ರಾ ಗೌಡ #Pavithra Gowda ಅವರನ್ನೂ ಸಹ ಪೊಲೀಸರು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಳಸಂಚಿನ ಆರೋಪದಲ್ಲಿ ಪವಿತ್ರಾ ಗೌಡ ಅವರನ್ನೂ ಸಹ ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
Also read: ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದರ್ಶನ್ ಸೇರಿ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ ಪವಿತ್ರಾ ಗೌಡಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post