No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ಧೇನು?

kalpa News by kalpa News
February 21, 2022
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ #Shivamogga Bajarangadal Harsha murder ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ಸರ್ಕಾರ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ #Siddaramaiah ಅವರು ಹೇಳಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಘಟನೆಯನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗುತ್ತದೆ. ಗೃಹ ಸಚಿವರ ಸ್ವಂತ ಜಿಲ್ಲೆಯಲ್ಲಿಯೇ ಕೊಲೆ ನಡೆದಿದೆ. ಹೀಗಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ #Home Minister Araga Gnanendra ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.


ಮಾಧ್ಯಮ ಪ್ರತಿನಿಧಿಗಳಿಗೆ ಸಿದ್ದರಾಮಯ್ಯ ಅವರು ಹೇಳಿದ್ದು :

ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು. ಹರ್ಷ ಅವರ ಕೊಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು.

ಆರೋಪಿಗಳು ಯಾವುದೇ ಸಮುದಾಯ, ಸಂಘಟನೆಗೆ ಸೇರಿದ್ದರೂ ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈಶ್ವರಪ್ಪ, ಯುಡಿಯೂರಪ್ಪ #Yadiyurappa ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಿಲ್ಲೆ ಇದು. ಇದು ಏನನ್ನು ಸೂಚಿಸುತ್ತದೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹಾಳಾಗಿರುವುದಕ್ಕೆ ಇದು ಉದಾಹರಣೆ. ಈಶ್ವರಪ್ಪ, #Eshwarappa ಆರಗ ಜ್ಞಾನೇಂದ್ರ #Araga Gnanendra ಇದಕ್ಕೆ ಜವಾಬ್ದಾರರು.

ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕಠಿಣವಾದ ತನಿಖೆ ಮಾಡಲಿ. ಬೆಂಗಳೂರಿನಲ್ಲಿ ಕುಳಿತು ಕಾಂಗ್ರೆಸ್ ಅಥವಾ ಯಾರ ಮೇಲೋ ಆರೋಪ ಮಾಡುವುದಲ್ಲ.

ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ: 
ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ ಆಗಿರುವುದರಿಂದ ಘಟನೆ ಹಿನ್ನೆಲೆಯಲಿ ಅವರು ರಾಜಿನಾಮೆ ಕೊಡಬೇಕು. ಆದರೆ, ಅವರು ಭಂಡರು. ರಾಜಿನಾಮೆ ಕೊಡುವುದಿಲ್ಲ. ನಮ್ಮ ಸರ್ಕಾರ ಇದ್ದಾಗ ಕೆ.ಜೆ. ಜಾರ್ಜ್ ಅವರು ರಾಜಿನಾಮೆ ಕೊಟ್ಟಿದ್ದರು. ರಾಜಿನಾಮೆ ಕೊಡುವುದೇ ಇಲ್ಲ ಎಂದು ಹೇಳಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ.

Also Read: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆಯೇನು?

ಸದನ ನಡೆಸಲು ಕಾಂಗ್ರೆಸ್‍ನವರಿಗೆ ಆಸಕ್ತಿ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಕ್ಕೆ ಅವಮಾನ ಆಗುವಂಥ ಹೇಳಿಕೆ ನೀಡಿದಾಗ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಾರೆ ಎಂದು ಬಿಜೆಪಿಯವರಿಗೆ ಗೊತ್ತು.

40 ಪರ್ಸೆಂಟ್ ಕಮಿಷನ್, ಬಿಟ್ ಕಾಯಿನ್ ಹಗರಣದ ಬಗ್ಗೆ ನಾವು ಪ್ರಸ್ತಾಪ ಮಾಡುತ್ತೇವೆ ಎಂಬ ಕಾರಣಕ್ಕೆ ಸದನ ನಡೆಯುವುದು ಅವರಿಗೂ ಇಷ್ಟವಿಲ್ಲ. ಹೀಗಾಗಿಯೇ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸುತ್ತಿಲ್ಲ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, #CM Basavaraja Bommai ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಅಶೋಕ್ ಅವರು ಸಂಧಾನಕ್ಕೆ ಬಂದಾಗ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸಿ, ನಾವು ಸದನಕ್ಕೆ ಹಾಜರಾಗುತ್ತೇವೆ ಎಂದು ಹೇಳಿದ್ದೆವು.

ದೇಶದ ಗೌರವದ ಸಂಕೇತವಾದ ರಾಷ್ಟ್ರಧ್ವಜಕ್ಕೆ ಈಶ್ವರಪ್ಪ ಅವರು ಅವಮಾನ ಮಾಡಿದಾಗ ಸುಮ್ಮನೆ ಕೂರಲು ಆಗುವುದಿಲ್ಲ ಎಂದಿದ್ದೆವು. ಆದರೆ, ಅದಕ್ಕೆ ಅವರು ಒಪ್ಪಲು ತಯಾರಿಲ್ಲ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೇ ಕಾಳಜಿ ಇಲ್ಲ.

Also Read: ಬಜರಂಗ ದಳ ಯುವಕನ ಹತ್ಯೆ ಹಿನ್ನೆಲೆ ಶಿವಮೊಗ್ಗದಲ್ಲಿ ಪೊಲೀಸ್ ಸರ್ಪಗಾವಲು


ಈಶ್ವರಪ್ಪ ಅವರು ರಾಜಿನಾಮೆ ಕೊಟ್ಟಿದ್ದರೆ ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಿದ್ದರೆ ನಾವೇಕೆ ಧರಣಿ ಮಾಡುತ್ತಿದ್ದೆವು.

ಜೆಡಿಎಸ್ ಶಾಸಕರು ನಮ್ಮ ವಿರುದ್ಧ ಪ್ರತಿಭಟನೆ ಮಾಡಲಿ, ಇದಕ್ಕೆ ನಮ್ಮ ತಕರಾರು ಇಲ್ಲ. ನಾವು ನಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದೇವೆ. ಅವರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ.

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಾಗ ಮೌನದಿಂದ ಇರಲು ಸಾಧ್ಯವೇ ? ಒಂದು ವೇಳೆ ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರೆ ನಾವು ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Bajarangadal Harsha murderShivamogga NewsSiddaramaiahಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆಯೇನು?

Next Post

ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ – ಸಿಕ್ಕಸಿಕ್ಕಲ್ಲಿ ಬೆಂಕಿ

kalpa News

kalpa News

Next Post
ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ – ಸಿಕ್ಕಸಿಕ್ಕಲ್ಲಿ ಬೆಂಕಿ

ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ - ಸಿಕ್ಕಸಿಕ್ಕಲ್ಲಿ ಬೆಂಕಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL