Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶೀಘ್ರದಲ್ಲೇ ಉಚಿತ ಮರಳು ನೀತಿ ಜಾರಿ: ಸಚಿವ ಮುರುಗೇಶ್ ನಿರಾಣಿ ಘೋಷಣೆ

March 20, 2021
in Small Bytes, ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು 10 ಲಕ್ಷದೊಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದಲ್ಲೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಯಲ್ಲಿ ಘೋಷಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ 10 ಲಕ್ಷದೊಳಗಿನ ಮನೆಗೆ 100ರಿಂದ 200 ರೂ. ಟನ್ ದರದಲ್ಲಿ ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು.

ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರದಿಂದಲೇ ಉಚಿತವಾಗಿ ಮರಳು ಪೂರೈಕೆ ಮಾಡುವ ಯೋಜನೆ ಇದೆ. ಗ್ರಾಮಪಂಚಾಯ್ತಿಯಿಂದ ಹಿಡಿದು ನಗರಸಭೆ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಮಾಡುವವರೆಗೆ ಇದು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈಗಾಗಲೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಳ್ಳ, ತೊರೆ ಮತ್ತಿತರ ಕಡೆ ಎತ್ತಿನಗಾಡಿ ಮೂಲಕ ಮರಳು ಸಾಗಿಸಲು ಅವಕಾಶ ಕಲ್ಪಿಸಿದ್ದೇವೆ. ಪ್ರಸ್ತುತ ರಾಜ್ಯದ 193 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ 87 ಬ್ಲಾಕ್‌ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
1,2 ಮತ್ತು 3ನೇ ಶ್ರೇಣಿಯ ಹಳ್ಳ, ತೊರೆ ಮತ್ತು ಕೆರೆಗಳಲ್ಲಿ ಲಭ್ಯವಿರುವ ಮರಳನ್ನು ಗ್ರಾಪಂ ಮೂಲಕ ವಿಲೇವಾರಿ ಮಾಡಲು ಅವಕಾಶ ನೀಡಲಾಗಿದೆ. ಅದೇ ರೀತಿ 4,5 ಮತ್ತು 6ನೇ ಶ್ರೇಣಿಯ ಹೊಳೆ, ನದಿ, ಅಣೆಕಟ್ಟು, ಜಲಾಶಯ, ಬ್ಯಾರೇಜ್ ಹಾಗೂ ಅಣೆಕಟ್ಟಿನ ಇನ್ನೀರಿನ ಪ್ರದೇಶಗಳಲ್ಲಿ ಮರಳು ತೆಗೆಯಲು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಮತ್ತು ಹಟ್ಟಿ ಚಿನ್ನದ ಗಣಿಗೆ ವಹಿಸಲಾಗಿದೆ ಎಂದರು.

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ 46 ಹಾಗೂ ಹಟ್ಟಿ ಚಿನ್ನದ ಗಣಿಶ್ರೇಣಿಯ 43 ಮರಳು ಬ್ಲಾಕ್‌ಗಳಲ್ಲಿ ಗಣೀಗಾರಿಕೆ ನಡೆಸಲು ಆಯಾ ಜಿಲ್ಲಾ ಮರಳು ಸಮಿತಿಗಳಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ಕಠಿಣ ಕ್ರಮ
ರಾಜ್ಯದ ಬಹುತೇಕ ಕಡೆ ಒಂದೇ ಪರ್ಮಿಟ್‌ನಲ್ಲಿ ಅನೇಕರು ಕಾನೂನು ಬಾಹೀರವಾಗಿ ಮರಳು ಸಾಗಿಸುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಕಡೆ ನಾನು ಸಭೆಗಳನ್ನು ನಡೆಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ ಎಂದರು.

ಕಾನೂನು ಬಾಹೀರ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ಅಧಿಕಾರಿಗಳನ್ನು ತನಿಖೆ ನಡೆಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಒಂದು ವೇಳೆ ನಮ್ಮ ಇಲಾಖೆಯ ಅಧಿಕಾರಿಗಳು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುರುಗೇಶ್ ನಿರಾಣಿ ಎಚ್ಚರಿಕೆ ನೀಡಿದರು.

ನಾನು ಪ್ರವಾಸ ಮಾಡಿದ ರಾಜ್ಯದ ಎಲ್ಲಾ ಕಡೆ ಮರಳಿನ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕಂದಾಯ, ಅರಣ್ಯ, ಗೃಹ, ಪರಿಸರ ಮತ್ತು ಮಾಲಿನ್ಯನಿಯಂತ್ರಣ ಮಂಡಳಿಯಲ್ಲಿ ಇಂತಹ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಏಕಗಾವಾಕ್ಷಿ ಪದ್ಧತಿಯನ್ನು ಜಾರಿ ಮಾಡುತ್ತಿರುವುದಾಗಿ ತಿಳಿಸಿದರು.

ಮರಳುಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 150 ಕೋಟಿ ಆದಾಯ ಬರುತ್ತದೆ. ಕೆಲವು ಕಡೆ ಸೋರಿಕೆಯಾಗುತ್ತಿರುವುದನ್ನು ತಡೆಗಟ್ಟಲು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಎಲ್ಲಿಯೂ ಕೂಡ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುತ್ತಿಲ್ಲ. ಒಂದು ವೇಳೆ ನನ್ನ ಗಮನಕ್ಕೆ ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದರು.

ನಾನು ಸಚಿವನಾದ ನಂತರ ಜಿಲ್ಲಾ ಪ್ರವಾಸ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಮಣ್ಣನ್ನು ಫಿಲ್ಟರ್ ಮಾಡಿ ಕೆಲವು ಕಡೆ ಮರಳು ತಯಾರಿಸುತ್ತಿದ್ದಾರೆ ಎಂಬ ಆರೋಪವೂ ಇದೆ. ಇಂತಹ ಪ್ರಕರಣಗಳಲ್ಲಿ ಯಾರೇ ಭಾಗಿಯಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಅವರ ಮೇಲೂ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಹಾಸನ ಸೇರಿದಂತೆ ರಾಜ್ಯದ ಅನೇಕ ಕಡೆ ಮಣ್ಣನ್ನು ಫಿಲ್ಟರ್ ಮಾಡಿ ಮರಳಿನ ರೂಪದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದನ್ನು ಬಳಕೆ ಮಾಡಿ ಮನೆ ಕಟ್ಟಿದರೆ ಕಟ್ಟಡಗಳು ಉರುಳಿ ಬೀಳುತ್ತವೆ. ಮೊದಲು ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಡಾ.ಅನ್ನದಾನಿ ಮಾತನಾಡಿ, ನೀವು ರೈತರಿಗೆ ಎತ್ತಿನಗಾಡಿಯಲ್ಲಿ ಮರಳು ಸಾಗಾಣೆ ಮಾಡಲು ಅವಕಾಶ ಕೊಟ್ಟಿದ್ದೀರಿ ಎಂದು ಹೇಳುತ್ತೀರಿ. ಹಳ್ಳ-ಕೊಳ್ಳ, ಕೆರೆ ಮತ್ತಿತರ ಕಡೆ ಮರಳು ತೆಗೆಯಲು ಹೋದರೆ ಪೊಲೀಸರು ರೈತರ ಎತ್ತಿನಗಾಡಿಗಳನ್ನೇ ವಶಪಡಿಸಿಕೊಂಡಿದ್ದಾರೆ. ರಾತ್ರಿ ವೇಳೆ ಟ್ರ್ಯಾಕ್ಟರ್, ಲಾರಿಗಳಲ್ಲಿ ಮರಳು ಸಾಗಾಣಿಕೆ ಮಾಡಿದರೂ ಪೊಲೀಸರು ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದಕ್ಕೆ ಕಡಿವಾಣ ಹಾಕಬೇಕೆಂದು ಹೇಳಿದರು.

ಇದಕ್ಕೆ ದನಿಗೂಡಿಸಿದ ಎಚ್.ಡಿ.ರೇವಣ್ಣ ಅವರು, ಬಹುತೇಕ ಕಡೆ ಇಂತಹ ಅಕ್ರಮ ನಡೆಯುತ್ತಿದೆ. ಇದನ್ನು ಪರಿಶೀಲಿಸಲು ನಿಮ್ಮ ಇಲಾಖೆಯಲ್ಲಿ ಅಧಿಕಾರಿಗಳೇ ಇಲ್ಲ. ಒಂದಿಬ್ಬರು ಇದ್ದರೂ ಅವರು ಏನು ಮಾಡಲಾಗದ ಸ್ಥಿತಿಗತಿಯಲ್ಲಿ ಇರುತ್ತಾರೆ. ಕಾನೂನು ಬಾಹಿರ ಚಟುವಟಿಕೆಗಳಿಗೆ ಅಕಾರಿಗಳೇ ಕುಮ್ಮಕ್ಕು ನೀಡುತ್ತಿದ್ದಾರೆ. ಸಣ್ಣ ಪ್ರಮಾಣದಲ್ಲಿ ಮರಳು ಸಾಗಾಣಿಕೆ ಮಾಡಿದರೆ ರೈತರ ಮೇಲೆ ಮೊಕದ್ದಮೆ ದಾಖಲಿಸುತ್ತೀರಿ. ಸರ್ಕಾರದ ಬೊಕ್ಕಸಕ್ಕೆ ನೂರಾನು ಕೋಟಿ ನಷ್ಟವಾಗುತ್ತಿದೆ. ಮೊದಲು ಇದನ್ನು ಸರಿಪಡಿಸಲು ಸ್ಪಷ್ಟವಾದ ಕಾನೂನು ತನ್ನಿ ಎಂದರು.

ಮರಳು ವಿಚಾರದಲ್ಲಿ ಸಾಕಷ್ಟು ಲೋಪಗಳಿರುವುದು ನನಗೂ ಗೊತ್ತು. ಎಲ್ಲವನ್ನೂ ಬಗೆಹರಿಸುವುದಾಗಿ ಸಚಿವ ನಿರಾಣಿ ಆಶ್ವಾಸನೆ ನೀಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreKannada News WebsiteKarnatakaLatest News KannadaLocal NewsMurugesh NiraniPolitical NewsSand NewsState Newsಬೆಂಗಳೂರು
Previous Post

ಪ್ರತಿಭೆ ಎನ್ನುವುದು ಶಕ್ತಿಯಿದ್ದಂತೆ: ಬಿ.ಸಿ.ಪಾಟೀಲ್

Next Post

ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕದೋಷ: ಹಲವು ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕದೋಷ: ಹಲವು ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!