ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಮೈಸೂರು |
ಹಿಜಾಬ್ ಧರಿಸಿ ಕಾಲೇಜಿಗೆ ಬಂದಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆದರೆ ಅವರಿಗೆ ತರಗತಿಗಳು ನಡೆಯುತ್ತಿಲ್ಲ. ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸುವುದು ಸೂಕ್ತವಲ್ಲ ಎನ್ನುವ ಕಾರಣದಿಂದ ಅವರನ್ನು ಕೊಠಡಿಯಲ್ಲಿ ಕೂರಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ವಿರೋಧಗಳು ಎದುರಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ಧಿಗಾರರೊಂದಿಗೆ ಮಾತನಾಡಿ, ಮುಗ್ಧ ಹೆಣ್ಣುಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನವಲ್ಲ. ಅವರು ನಮ್ಮ ಮಕ್ಕಳು. ಅವರನ್ನು ರಸ್ತೆಯಲ್ಲಿ ನಿಲ್ಲಿಸುವುದು ಸೌಜನ್ಯವಲ್ಲ. ಅವರ ಮುಗ್ಧತೆಯನ್ನು ಕೆಲ ರಾಜಕಾರಣಿಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post