ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ವಿಲ್ಸನ ಗಾರ್ಡನ್ ಮನೆಯೊಂದಲ್ಲಿ ನಿಗೂಢ ಸ್ಫೋಟದಲ್ಲಿ #Mysterious Explosion ಓರ್ವ ಬಾಲಕ ಸಾವನ್ನಪ್ಪಿದ್ದುಮ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸುಮಾರು 10ಕ್ಕೂ ಅಧಿಕ ಮನೆಗಳು ಧ್ವಂಸವಾಗಿರುವುದು ಹಲವು ಅನುಮಾನಗಲಿಗೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಮೃತ ಬಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಲ್ಲದೇ, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಟಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post