ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರು ಕಟುವಾಗಿ ಟೀಕಿಸಿದರು.
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

Also read: ನ.11ರಂದು ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ಮೋದಿ ಚಾಲನೆ
ಕೆಂಪೇಗೌಡ ಪ್ರತಿಮೆ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಇದಕ್ಕೆ ನಾನು ಹೆಚ್ಚು ಮಹತ್ವ ಕೊಡಲು ಹೋಗುವುದಿಲ್ಲ ಎಂದರು ಅವರು.

ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದೇ ರೀತಿ ನಿರುದ್ಯೋಗ ಸಮಸ್ಯೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಮಾಡಿದ್ದಾರೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post