ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಂದಿನಿ Nandini ಹಾಲು ಹಾಗೂ ಮೊಸರಿನ ಬೆಲೆ ಏರಿಕೆ ವಿವಾದಕ್ಕೆ ತೆರೆ ಬಿದ್ದಿದ್ದು, ಎರಡೂ ಉತ್ಪನ್ನಗಳ ಬೆಲೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಮಾತನಾಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, Balachandra Jarkiholi ನಿರ್ದೇಶಕ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹಾಲು ಹಾಗೂ ಮೊಸರಿನ ಬೆಲೆಯನ್ನು ಪ್ರತಿ ಲೀಟರ್’ಗೆ 2 ರೂ. ಏರಿಕೆ ಮಾಡಲಾಗಿದೆ ಎಂದಿದ್ದಾರೆ.
ಇಂದು ಮಧ್ಯರಾತ್ರಿಯಿಂದಲೇ(ಗುರುವಾರ ಮುಂಜಾನೆ) ಜಾರಿಗೆ ಬರುವಂತೆ ದರ ಏರಿಕೆ ಮಾಡಲಾಗಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಕೋರಿದ್ದಾರೆ.
Also read: ಕೋಟೆ ನಾಡು ಚಿತ್ರದುರ್ಗದ ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿಗಳ ಬಲ
ದರ ಹೆಚ್ಚಳದಿಂದ ಬರುವ ಹೆಚ್ಚುವರಿ ಆದಾಯವನ್ನು ಹಾಲು ಉತ್ಪಾದಕರಿಗೆ ನೀಡಲು ನಿರ್ಧರಿಸಲಾಗಿದೆ. ಇದರಿಂದ ಅವರುಗಳ ಶ್ರಮಕ್ಕೆ ಬೆಂಬಲ ನೀಡಿದಂತಾಗುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post