ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ #Aparna ನಿನ್ನೆ ವಿಧಿವಶರಾಗಿದ್ದು, ಇಂದು ಬೆಂಗಳೂರಿನಲ್ಲಿಯೇ ಅವರ ಅಂತ್ಯಕ್ರಿಯೆ ನಡೆಯಲಿದೆ.
ಬನಶಂಕರಿಯಲ್ಲಿರುವ ಅವರ ಸ್ವಗೃಹದಲ್ಲಿಯೇ ಅಂತಿಮ ದರ್ಶನ ನಡೆಯುತ್ತಿದ್ದು, ಗಣ್ಯಾತಿಗಣ್ಯರು ಕೊನೆಯ ನಮನ ಸಲ್ಲಿಸುತ್ತಿದ್ದಾರೆ.
ಇನ್ನು, ಇಂದು ಮಧ್ಯಾಹ್ನ 12 ಗಂಟೆ ಬಳಿಕ ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ, ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Also read: ನಟನಂ ಬಾಲ ನಾಟ್ಯ ಕೇಂದ್ರಕ್ಕೆ ಗಂಗೂಬಾಯ್ ಹಾನಗಲ್ ಸಂಗೀತ ವಿವಿ ಮಾನ್ಯತೆ
ಅಪರ್ಣಾ ಪತಿ ಭಾವುಕ
ಇನ್ನು, ಮಾಧ್ಯಮಗಳೊಂದಿಗೆ ಮಾತನಾಡಿರುವ ಅಪರ್ಣಾ ಪತಿ ನಾಗರಾಜ್ ವಸ್ತಾರೆ, ತುಂಬಾ ಖಾಸಗಿಯಾಗಿ ಬದುಕಿದವಳು ಅಪರ್ಣಾ. ಅಷ್ಟೇ ಖಾಸಗಿಯಾಗಿ ಬೀಳ್ಕೊಡಲು ಬಯಸುತ್ತೇನೆ. ಅವಳು ನನಗೆ ಸಲ್ಲುವುದಕ್ಕೆ ಮುಂಚೆನೇ ಕರ್ನಾಟಕಕ್ಕೆ ಸೇರಿದವಳು. ಮಾಧ್ಯಮದವರ ಮುಂದೆಯೇ ನಿಂತು ಏನಾಯ್ತು ಅಂತಾ ಹೇಳಬೇಕು ಅನ್ನೋದು ಅವಳ ಆಸೆಯಾಗಿತ್ತು. ಅಷ್ಟನ್ನೇ ನಾನು ಹೇಳ್ತಿದ್ದೀನಿ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post