ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇತ್ತೀಚೆಗೆ ಉಕ್ರೇನ್‌ನ Ukraine ಖಾರ್ಕಿವ್ ನಲ್ಲಿ ರಷ್ಯಾ Russia ನಡೆಸಿದ ಶೆಲ್ ದಾಳಿ ಸಂದರ್ಭದಲ್ಲಿ ಮೃತಪಟ್ಟ ಭಾರತೀಯ ವೈದ್ಯ ವಿದ್ಯಾರ್ಥಿ ನವೀನ್ Naveen ಮೃತ ದೇಹ ಸೋಮವಾರ ಬೆಳಿಗ್ಗೆ ಬೆಂಗಳೂರು ತಲುಪಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಮಾ.21ರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ತಿಳಿಸಿದ್ದಾರೆ.
“ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ” : ಮುಖ್ಯಮಂತ್ರಿ @BSBommai
— CM of Karnataka (@CMofKarnataka) March 18, 2022
ನವೀನ್ ಶೇಖರಪ್ಪ ಗ್ಯಾನಗೌಡರ್ ಮಾರ್ಚ್ 21 ರಂದು ರಷ್ಯಾ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದು,, ಉಕ್ರೇನ್ ನ ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು.
Also read: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post