ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇತ್ತೀಚೆಗಷ್ಟೇ ರಾಜ್ಯದಲ್ಲಿ ಅಧಿಕಾರಕ್ಕೇರಿದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಶೇ.4 ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಮೂಲ ವೇತನದ ಶೇ.31ರಿಂದ 35ಕ್ಕೆ ಏರಿಕೆ ಮಾಡಿದ್ದು, 2023ರ ಜನವರಿ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ ಎಂದು ತಿಳಿಸಿದೆ.
ಈ ತುಟ್ಟಿ ಭತ್ಯೆ ಹೆಚ್ಚಳ ಹಾಲಿ ಸರ್ಕಾರಿ ನೌಕರರು, ನಿವೃತ್ತ ನೌಕರರು, ಯುಜಿಸಿ, ಎಐಸಿಟಿಸಿ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಇದು ಅನ್ವಯಿಸಲಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post