ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಭೂಸ್ವಾಧೀನ ಪ್ರಕರಣಗಳಲ್ಲಿ ವಿಳಂಬ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳರವರು ವಿಧಾನಸಭೆಯಲ್ಲಿ ತಿಳಿಸಿದರು.
ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕರವರ ಗಮನಸೆಳೆಯುವ ಸೂಚನೆಗೆ ಸಚಿವರು ಉತ್ತರಿಸುತ್ತಿದ್ದರು. ನೂತನ ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆ ಅಡಿಯಲ್ಲಿ ಒಟ್ಟಾರೆಯಾಗಿ 3,639 ಎಕರೆ 37 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನ ಪಡಿಸಿಕೊಂಡ ಭೂಮಿಗೆ ಒಟ್ಟಾರೆಯಾಗಿ ರೂ.43,87,82,731/-ಗಳನ್ನು ಪಾವತಿಸಬೇಕಾಗಿದ್ದು, ಇದರಲ್ಲಿ ರೂ.42,74,95,205/-ಗಳ ಪರಿಹಾರ ಧನವನ್ನು ಪಾವತಿಸಲಾಗಿದೆ ಹಾಗೂ ಬಾಕಿ ಇರುವ ರೂ.1,12,87,526ಗಳನ್ನು ಆದ್ಯತೆಯ ಮೇರೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.
ಆದರೆ, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ 30.17 ಕೋಟಿ ರೂಪಾಯಿ ರೈತರಿಗೆ ಪರಿಹಾರ ನೀಡುವುದು ಬಾಕಿ ಇದೆ ಎಂದು ಪರಮೇಶ್ವರ ನಾಯಕ್ ರವರು ಹೇಳಿದಾಗ ಈ ವಿವರಗಳನ್ನು ಪರಿಶೀಲಿಸಿ, 2013ರ ಕಾಯಿದೆಯಂತೆ ಅಥವಾ ಅದಕ್ಕೂ ಮೊದಲಿನ ಕಾಯಿದೆಯೆಂತೆ ಪರಿಹಾರ ನೀಡುವುದು ಬಾಕಿ ಇದ್ದರೆ ಎಲ್ಲಾ ಪರಿಹಾರವನ್ನು ರೈತರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post