ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಹಕಾರ ಕ್ಷೇತ್ರದಿಂದ ರಾಜಕಾರಣಕ್ಕೆ ಪ್ರವೇಶ ಪಡೆದವರು ಸಹಕಾರ ಕ್ಷೇತ್ರವನ್ನು ಮರೆಯಬಾರದು ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕರ್ನಾಟಕ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ G T Devegowda ಹೇಳಿದರು.
ಬೆಂಗಳೂರಿನಲ್ಲಿಂದು ನಡೆದ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ರಾಜ್ಯ ಸಹಕಾರ ಮಹಾಮಂಡಳದ ಸಹಕಾರ ಶಿಕ್ಣಣ ತರಬೇತಿ ಕಾರ್ಯಕ್ರಮಗಳಿಗೆ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರಿಗೆ 2 ಕೋಟಿ ರೂಪಾಯಿ ಚೆಕ್ಕು ಸ್ವೀಕರಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ರಾಜೇಂದ್ರ ಕುಮಾರ್ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜಕಾರಣದಲ್ಲಿ ಅವರಿಗೆ ಸಾಕಷ್ಟು ಅವಕಾಶವಿತ್ತು. ಆದರೆ ಇನ್ನೂ ಸಹಕಾರ ಕ್ಷೇತ್ರದಲ್ಲಿ ಮುಂದುವರೆದು ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿರುವವರು ರಾಜಕಾರಣ ಪ್ರವೇಶಿಸಿ ಸಹಕಾರ ಕ್ಷೇತ್ರಕ್ಕೆ ಯಾವುದೇ ಕೆಲಸ ಮಾಡದೇ ತಮ್ಮ ಕರ್ತವ್ಯವನ್ನು ಮರೆತಿದ್ದಾರೆ.ಇದು ಸರಿಯಲ್ಲ. ಮುಂಬರುವ ದಿನಗಳಲ್ಲಿ ರಾಜೇಂದ್ರ ಕುಮಾರ್ ಅವರಿಗೆ ಸಹಕಾರ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಸ್ಥಾನ ದೊರೆಯಲಿ ಎಂದು ಹೇಳಿದರು.

ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಕರ್ನಾಟಕ ಮಾರಾಟ ಸಹಕಾರ ಮಹಾಮಂಡಳದಿಂದ ತಮ್ಮ ಲಾಭದಲ್ಲಿನ ಶೇ 2 ರಷ್ಟು ಹಣವನ್ನು ಸಹಕಾರ ಮಹಾಮಂಡಳಕ್ಕೆ ನೀಡುವ ನಿಯಮವಿದೆ ಅದರಂತೆ ಎರಡು ಕೋಟಿ ರೂಪಾಯಿ ಹಣವನ್ನು ಮಹಾಮಂಡಳಕ್ಕೆ ನೀಡಲಾಗಿದೆ. ಜಿ.ಟಿ ದೇವೇಗೌಡರು ಮಹಾಮಂಡಳದ ಏಳಿಗೆಯಲ್ಲಿ ಶ್ರಮಿಸುತ್ತಿದ್ದಾರೆ ಎಂದರು
ಮಹಾಮಂಡಳದ ನಿರ್ದೇಶಕರು, ಸಹಕಾರ ಮಹಾಮಂಡಳದ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.










Discussion about this post