ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಹತ್ವದ ನಿರ್ಧಾರವೊಂದರಲ್ಲಿ ಇನ್ನು ಮುಂದೆ ರಾಜ್ಯ ಸರ್ಕಾರ ಸಭೆ – ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಆದೇಶಿಸಲಾಗಿದೆ.
ಈ ಕುರಿತಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದು, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದರಂತೆ, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ – ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು. ಆದರೆ, ಕನ್ನಡ ಪುಸ್ತಕ ನೀಡಲು ಅನುಮತಿ ನೀಡಲಾಗಿದೆ.
ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳ ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post