ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2025ರ ಆಗಸ್ಟ್ ವೇಳೆಗೆ ನೆಲಮಂಗಲು-ತುಮಕೂರು ನಡುವಿನ 10 ಪಥದ(ದಶಪಥ) ಹೆದ್ದಾರಿ 10 Lane Highway ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಕುರಿತಂತೆ ರಾಜ್ಯಸಭಾ ಅಧಿವೇಶನದಲ್ಲಿ ಮಾತನಾಡಿರುವ ಅವರು, ಈ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನಾಗಿ ವಿಸ್ತರಣೆ ಮಾಡುವ ಮೊದಲ ಹಂತದ ಕಾಮಗಾರಿ ನಡೆಯುತ್ತಿದೆ. ಸುಮಾರು 844 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು-ತುಮಕೂರು ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, 44.04 ಕಿ.ಮೀ ದೂರದ ಹೆದ್ದಾರಿ 3 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48ರ 29.5 ಕಿ.ಮೀ ನಿಂದ 75 ಕಿ.ಮೀ ವರೆಗಿನ ತುಮಕೂರು ಬೈಪಾಸ್ ಸೇರಿದಂತೆ ನೆಲಮಂಗಲದಿಂದ ತುಮಕೂರು ಭಾಗದ 6 ಪಥಗಳನ್ನು 2 ಹಂತಗಳಾಗಿ ವಿಂಗಡಿಸಲಾಗಿದೆ. ಮೊದಲನೆಯ ಹಂತ ಸರ್ವಿಸ್ ರಸ್ತೆಗಳ ನಿರ್ಮಾಣವಾಗಿದ್ದು, 2ನೆಯ ಹಂತ ಮುಖ್ಯ ಕ್ಯಾರೇಜ್ವೇ ನಿರ್ಮಾಣವಾಗಿದೆ. ಮೊದಲ ಹಂತದಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. 2025 ಆಗಸ್ಟ್ 24 ಒಳಗಡೆ ಈ ಯೋಜನೆ ಪೂರ್ಣಗೊಳ್ಳುವಂತೆ ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post