ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿರುವ ಹೋಂಸ್ಟೇಗಳು #Homestay ವಿದೇಶಿ ಪ್ರವಾಸಿಗರು ಸೇರಿದಂತೆ ಎಲ್ಲ ಪ್ರವಾಸಿಗರಿಗೆ ಸೂಕ್ತ ಭದ್ರತಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಮಾರ್ಚ್ 6 ರಂದು ಕೊಪ್ಪಳ ಜಿಲ್ಲೆಯಲ್ಲಿ ಒಡಿಶಾದ ಪ್ರವಾಸಿಗರೊಬ್ಬರ ಕೊಲೆ ಹಾಗೂ ಇಸ್ರೇಲಿ ಪ್ರವಾಸಿ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ನಡೆದ ನಂತರ ರಾಜ್ಯ ಸರ್ಕಾರ ಮಂಗಳವಾರ ಹೋಂಸ್ಟೇ, ರೆಸಾರ್ಟ್ ಮತ್ತು ಹೋಟೆಲ್‌ಗಳಿಗೆ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಹೇಳಿದೆ.
ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿರುವ #Tourism Places ಹೋಂಸ್ಟೇಗಳು ವಿದೇಶಿ ಪ್ರವಾಸಿಗರು #Forigner ಸೇರಿದಂತೆ ಎಲ್ಲ ಪ್ರವಾಸಿಗರಿಗೆ ಸೂಕ್ತ ಭದ್ರತಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರವಾಸಿಗರನ್ನು ದೂರದ ಅಥವಾ ನಿರ್ಜನ ಪ್ರದೇಶಗಳಿಗೆ ಕರೆದೊಯ್ಯುವ ಮೊದಲು, ಪೂರ್ವ ಮಾಹಿತಿಯನ್ನು ಒದಗಿಸಬೇಕು ಮತ್ತು ಅದಕ್ಕೆ ಸಂಬಂಧಿತ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ.
Also read: ಸುಂಕ ಕಡಿತಕ್ಕೆ ವಿಚಾರವಾಗಿ ಮಾತು ಕೊಟ್ಟಿಲ್ಲ | ಅಮೇರಿಕಕ್ಕೆ ಭಾರತ ತಿರುಗೇಟು
ಪೊಲೀಸ್ ಅಥವಾ ಅರಣ್ಯ ಇಲಾಖೆಯಿಂದ ಪೂರ್ವಾನುಮತಿ ಇಲ್ಲದೆ ಪ್ರವಾಸಿಗರನ್ನು ದೂರದ ಸ್ಥಳಗಳು, ಹೊರವಲಯಗಳು ಅಥವಾ ಅರಣ್ಯ ಪ್ರದೇಶಗಳಿಗೆ ಕರೆದೊಯ್ದರೆ, ದುಷ್ಕರ್ಮಿಗಳು ಅಥವಾ ಕಾಡು ಪ್ರಾಣಿಗಳಿಂದ ಉಂಟಾಗುವ ಯಾವುದೇ ಘಟನೆಗಳಿಗೆ ಹೋಂಸ್ಟೇ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಅಲ್ಲದೇ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Discussion about this post