ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ನವದೆಹಲಿ |
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ Siddaramaiah ಹೆಸರು ಬಹುತೇಕ ಅಂತಿಮಗೊಂಡಿದ್ದು, ಮಧ್ಯಾಹ್ನದ ಒಳಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸಿಎಂ ಹುದ್ದೆಗೆ ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ DKShivakumar ನಡುವೆ ಭಾರೀ ಜಟಾಪಟಿ ನಡೆದಿದ್ದು, ಅಧಿಕಾರ ಹಂಚಿಕೆ ಅಂತಿಮಗೊಳಿಸಲು ರಾಹುಲ್‌ಗಾಂಧಿ ನಿವಾಸದಲ್ಲಿ ಅಂತಿಮ ಹಂತದ ಸಭೆ ನಡೆಯುತ್ತಿದ್ದು, ವರದಿಗಳಂತೆ ಮೊದಲ ಎರಡು ವರ್ಷ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಜೊತೆ ಎರಡು ಪ್ರಭಲ ಖಾತೆಯನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲು ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ.
ಸಿದ್ಧರಾಮಯ್ಯ ಸಿಎಂ ಆಗಿ ಎರಡು ವರ್ಷ ಅವಧಿಯ ನಂತರ ಉಳಿದ ಮೂರು ವರ್ಷದ ಅವಧಿಗೆ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ಪ್ರಭಲ ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲಾಗುತ್ತಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ಅವರೊಂದಿಗೆ ಅಂತಿಮ ಸಭೆ ನಡೆಯುತ್ತಿದ್ದು, ಸಭೆಯ ನಂತರ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ವರದಿಯಾಗಿದೆ.
ಅಂದುಕೊಂಡಂತೆ ನಡೆದರೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post