ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎರಡು ಲೋಕಸಭಾ ಕ್ಷೇತ್ರಗಳು, ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು 14 ಬಿಬಿಎಂಪಿ ವಾರ್ಡ್ ಗಳನ್ನು ಹಾದುಹೋಗುವ – ಮೈಸೂರು ರಸ್ತೆಯ ನಾಯಂಡ ಹಳ್ಳಿ ಜಂಕ್ಷನ್ ನಿಂದ – (ಹೊಸಕೆರೆ ಹಳ್ಳಿ, ದೇವೇಗೌಡ ಪೆಟ್ರೋಲ್ ಬಂಕ್ – ಕದಿರೇನ ಹಳ್ಳಿ ಪಾರ್ಕ್ – ಸಾರಕ್ಕಿ ಸಿಗ್ನಲ್ – ಜೆ.ಪಿ.ನಗರ) – ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ ಪುನೀತ್ ರಾಜ್‍ಕುಮಾರ್ ರಸ್ತೆ #Puneeth Rajkumar ಎಂದು ನಾಮಕರಣ ಮಾಡಲು ಅಧಿಕೃತ ಅನುಮೋದನೆ ಲಭಿಸಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ #BJP ಘಟಕ ಅಧ್ಯಕ್ಷರು ಹಾಗೂ ಬಿಬಿಎಂಪಿ #BBMP ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರು ಮತ್ತು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರಾದ ಎನ್.ಆರ್. ರಮೇಶ್ ಅವರು ಬಿಬಿಎಂಪಿ #BBMP ಮುಖ್ಯ ಆಯುಕ್ತರಿಗೆ ಮತ್ತು ಆಡಳಿತಾಧಿಕಾರಿಗಳಿಗೆ ನೀಡಿದ್ದ ಮನವಿ ಪತ್ರವನ್ನು ಪುರಸ್ಕರಿಸಿ – ನಿಯಮಾನುಸಾರ ಕಂದಾಯ ಇಲಾಖೆಯ ಜಂಟಿ ಆಯುಕ್ತರು ಸಂಬಧ ಪಟ್ಟ ಕಾರ್ಯಪಾಲಕ ಅಭಿಯಂತರರು ಮತ್ತು ಕಂದಾಯ ಅಧಿಕಾರಿಗಳಿಗೆ ಕೂಡಲೇ ಕ್ರಮ ತೆಗೆದುಕೊಂಡು ಕಡತವನ್ನು ಮಂಡಿಸುವಂತೆ ಆದೇಶಿಸಿದ್ದರು.
ಅದರಂತೆ, ಸದರಿ ರಸ್ತೆಯ ನಕ್ಷೆಯನ್ನು ತಯಾರಿಸಿ ಮತ್ತು ಈ ವ್ಯಾಪ್ತಿಯ ಸಾರ್ವಜನಿಕರಿಂದ ಆಕ್ಷೇಪಣೆಗಳ ಮಹಜರ್ ನಡೆಸಿದ ನಂತರ ಸುಮಾರು 700 ಕ್ಕೂ ಹೆಚ್ಚು ಮಂದಿ ಹಾಗೂ ಸದರಿ ರಸ್ತೆಗೆ ಹೊಂದಿಕೊಂಡಂತಿರುವ 09 ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳು ಈ ರಸ್ತೆಗೆ ಅಪ್ಪು ಅವರ ಹೆಸರಿಡುವ ಪರವಾಗಿ ಸಹಿ ಮಾಡಿದ್ದರು ಮತ್ತು ಯಾರೊಬ್ಬರೂ ವಿರುದ್ಧವಾಗಿ ಸಹಿ ಮಾಡದೇ ಇದ್ದ ಕಾರಣ – ಮುಖ್ಯ ಆಯುಕ್ತರ ಟಿಪ್ಪಣಿಯಂತೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕಾರಣ ಮಾಡುವ ಬಗ್ಗೆ ನಿರ್ಣಯ ಕೈಗೊಂಡು ಅಧಿಕೃತ ಅನುಮೋದನೆ ನೀಡಿದ್ದಾರೆ.
ವಿಶೇಷವೆಂದರೆ, ಗೊರಗುಂಟೆ ಪಾಳ್ಯದಿಂದ (ಡಾ. ರಾಜ್ ಕುಮಾರ್, ಪಾರ್ವತಮ್ಮ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಅವರ ಸಮಾಧಿಗಳು ಇರುವ ರಸ್ತೆ) #Dr. Rajkumar, #Parvathamma Rajkumar #Puneeth Rajkumar ಮೈಸೂರು ರಸ್ತೆಯ ನಾಯಂಡ ಹಳ್ಳಿ ಜಂಕ್ಷನ್ ವರೆಗಿನ ವರ್ತುಲ ರಸ್ತೆಗೆ 2015 ರ ಏಪ್ರಿಲ್ 08 ರಂದು ಡಾ. ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ ಎಂದು ಬಿಬಿಎಂಪಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಅಧಿಕೃತವಾಗಿ ರಸ್ತೆಯ ನಾಮಕರಣ ಸಮಾರಂಭವನ್ನು ಮಾಡಲಾಗಿತ್ತು.

(ವರದಿ: ಡಿ. ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post