ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್-19 ಹಿನ್ನೆಲೆ ಲಾಕ್‌ಡೌನ್ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಬಡ ಅರ್ಚಕರು, ಪುರೋಹಿತರು ಮತ್ತು ಅಡುಗೆ ಕೆಲಸದವರಿಗೆ ಧನಸಹಾಯ, ದಿನಸಿ ಕಿಟ್‌ಗಳನ್ನು ಒದಗಿಸಿ ಕೊಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೇಟಿ ಮಾಡಿ, ಮನವಿ ಸಲ್ಲಿಸಲಾಯಿತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈ ಕೂಡಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ ಹೆಚ್.ಎಸ್. ಸಚ್ಛಿದಾನಂದಮೂರ್ತಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿರಶೈವ ಅಭಿವೃದ್ಧಿ ನಿಗಮ ಅಧ್ಯಕ್ಷ ಪರಮಶಿವಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಸಚೇತಕ ಜೀವರಾಜ್, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ವೇ.ಬ್ರ. ಡಾ. ಭಾನುಪ್ರಕಾಶ್ ಶರ್ಮಾ, ವಿ. ಪವನ್ ಕುಮಾರ್, ಮುಖಂಡರಾದ ಶರತ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post