No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಫೆ. 23-25 | ಬೆಂಗಳೂರಿನ ವಿವೇಕಾನಂದ ವಿದ್ಯಾಲಯದಲ್ಲಿ ವಿಶೇಷ ಸಂಗೀತ ಕಚೇರಿ ಆಯೋಜನೆ

ಶ್ರೀ ಶಾರದಾ ಸಂಗೀತ ಸಭಾ 21ನೇ ವಾರ್ಷಿಕೋತ್ಸವ | ಗಣ್ಯ ವಿದ್ವಾಂಸರಿಗೆ ಸನ್ಮಾನ | ಹನುಮಂತನಗರದ ವಿದ್ಯಾಲಯದಲ್ಲಿ ಕಾರ್ಯಕ್ರಮ

kalpa News by kalpa News
February 21, 2024
in ಬೆಂಗಳೂರು ನಗರ
0
ಫೆ. 23-25 | ಬೆಂಗಳೂರಿನ ವಿವೇಕಾನಂದ ವಿದ್ಯಾಲಯದಲ್ಲಿ ವಿಶೇಷ ಸಂಗೀತ ಕಚೇರಿ ಆಯೋಜನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಾಮರಾಜಪೇಟೆ ರಾಘವೇಂದ್ರ ಕಾಲೋನಿಯ ಶ್ರೀ ಶಾರದಾ ಸಂಗೀತ ಸಭಾದ 21ನೇ #SharadaSangeethaSabha ವಾರ್ಷಿಕೋತ್ಸವ ಅಂಗವಾಗಿ ಫೆಬ್ರವರಿ 23, 24 ಹಾಗೂ 25ರಂದು ಸಂಜೆ 6ಕ್ಕೆ ವಿಶೇಷ ಸಂಗೀತ ಕಚೇರಿ ಆಯೋಜನೆ ಮಾಡಲಾಗಿದೆ.

ಭಾರತ ಸರಕಾರದ ಸಂಸ್ಕೃತಿ ಸಚಿವಾಲಯ, ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆ ಸಹಯೋಗದೊಂದಿಗೆ ಹನುಮಂತನಗರದ ಪಿಇಎಸ್ ಕಾಲೇಜು #PESCollege ಹಿಂಭಾಗದ ಸ್ವಾಮಿ ವಿವೇಕಾನಂದ ವಿದ್ಯಾಲಯ ಸಭಾಂಗಣದಲ್ಲಿ ಸಂಗೀತ ಕಚೇರಿ ಮತ್ತು ಗಣ್ಯ ವಿದ್ವಾಂಸರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ, ಹಿರಿಯ ಮೃದಂಗ ವಿದ್ವಾಂಸ ಟಿ.ಎನ್. ಶಶಿಕುಮಾರ್ ತಿಳಿಸಿದ್ದಾರೆ.
23ರಂದು ಸಂಜೆ 6ಕ್ಕೆ ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಮಹರಾಜ್ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ತೇಜಸ್ವಿ ಸೂರ‌್ಯ, ಶಾಸಕ ಗರುಡಾಚಾರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದೇ ಸಂದರ್ಭ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕ ಮತ್ತು ಅನುಗ್ರಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್, ಹಿರಿಯ ತಬಲಾ ಕಲಾವಿದ ಗುಂಡಶಾಸ್ತ್ರಿ ಅವರನ್ನು ಸನ್ಮಾನಿಸಲಾಗುತ್ತದೆ. ವಿದುಷಿ ರಮಾಮಣಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಸಿಕೊಡಲಿದ್ದಾರೆ.

Also read: ತಾಯಿ-ಮಗು ಮರಣ ಪ್ರಮಾಣ ತಗ್ಗಿಸುವಲ್ಲಿ ನಿಗಾ ವಹಿಸಿ: ಡಿಸಿ ವೆಂಕಟೇಶ್ ಸೂಚನೆ

ಪಕ್ಕವಾದ್ಯ ಕಲಾವಿದರಾಗಿ ವಿದುಷಿ ನಳಿನಾ ಮೋಹನ್ ಪಿಟೀಲು, ಅರ್ಜುನ ಕುಮಾರ್ ಮೃದಂಗ ಮತ್ತು ರಂಗನಾಥ ಚಕ್ರವರ್ತಿ ಘಟ ಸಹಕಾರ ನೀಡುವರು.
24ರ ಶನಿವಾರ ಸಂಜೆ 6ಕ್ಕೆ ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಕರಿಗೌಡ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಎನ್. ಚಲವಾದಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹಿರಿಯ ಸಂಗೀತ ಶಾಸ್ತ್ರಜ್ಞೆ ವಿದುಷಿ ಡಾ. ಮೀರಾ ರಾಜಾರಾಮ್ ಪ್ರಾಣೇಶ್ ಅವರಿಗೆ ಮತ್ತು ಖ್ಯಾತ ವೀಣಾ ಕಲಾವಿದೆ ರೇವತಿ ಕಾಮತ್ ಅವರಿಗೆ ಸನ್ಮಾನಿಸಲಾಗುವುದು. ನಂತರ ಖ್ಯಾತ ಗಾಯಕ ವಿದ್ವಾನ್ ಸಂಪಗೋಡು ಎಸ್. ವಿಘ್ನರಾಜ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನವಿದೆ. ಪಕ್ಕ ವಾದ್ಯದಲ್ಲಿ ವಿದ್ವಾಂಸರಾದ ಬಿ.ಕೆ. ರಘು ಪಿಟೀಲು, ಬಿ.ಸಿ. ಮಂಜುನಾಥ್ ಮೃದಂಗ ಮತ್ತು ಬಿ. ರಾಜಶೇಖರ್ ಮೋರ್ಸಿಂಗ್ ಸಹಕಾರ ನೀಡಿ ಮಾಧುರ್ಯ ಹೆಚ್ಚಿಸಲಿದ್ದಾರೆ.

ಭಾನುವಾರ 25ರ ಸಂಜೆ 6ಕ್ಕೆ ಬಿಬಿಎಂಪಿ ನಿಯಂತ್ರಕರಾದ ಕೆ . ಸುಬ್ರಮಣ್ಯ ಮತ್ತು ಕೆಎಎಸ್ ಅಧಿಕಾರಿ ಈ. ಚೆನ್ನಗಂಗಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಖ್ಯಾತ ಮೃದಂಗ ವಿದ್ವಾಂಸ ವಾಸುದೇವ ರಾವ್ ಮೋಹಿತೆ ಮತ್ತು ಸಂಗೀತ ಪ್ರವರ್ತಕ ಸಂತೋಷ್ ಅವರಿಗೆ ಸನ್ಮಾನಿಸಲಾಗುವುದು. ನಂತರ ಹಿರಿಯ ವಿದ್ವಾಂಸ ಟಿ.ಎಸ್. ಕೃಷ್ಣಮೂರ್ತಿ ಮತ್ತು ಶಿಷ್ಯರಿಂದ (12 ಜನ ಕಲಾವಿದರ) ವಯೋಲಿನ್ ವೈಭವ ಪ್ರಸ್ತುತಿ ಇದೆ. ಹಿರಿಯ ವಿದ್ವಾನ್ ಆನೂರು ಅನಂತಕೃಷ್ಣ ಶರ್ಮ (ಶಿವು) ಮತ್ತು ತಂಡದಿಂದ ತಾಳವಾದ್ಯಗಳ ಬೆಂಬಲ ವಿಶೇಷವಾಗಿ ಸಂಯೋಜನೆಗೊಂಡಿದೆ ಎಂದು ವಿದ್ವಾಂಸ ಟಿ.ಎನ್. ಶಶಿಕುಮಾರ್ ವಿವರಣೆ ನೀಡಿದ್ದಾರೆ.
ನಮ್ಮ ನಾಡಿನ ವಿದ್ವಾಂಸರಿಗೆ ವೇದಿಕೆ
ಮೂರು ದಿನಗಳ ಸಂಗೀತೋತ್ಸವದಲ್ಲಿ ನಮ್ಮ ನಾಡಿನ ಗಾಯಕರು, ವಿದ್ವಾಂಸರು ಮತ್ತು ಕಲಾವಿದರಿಗೆ ವಿಶೇಷವಾದ ವೇದಿಕೆಯನ್ನು ಕಲ್ಪಿಸಲಾಗಿದೆ. ಹೊರನಾಡಿನ ಕಲಾವಿದರನ್ನು ಬೆಂಬಲಿಸುವುದಕ್ಕಿಂತ ಮೊದಲು ನಾವು ನಮ್ಮ ನೆಲದ ಕಲಾವಿದರನ್ನು ಗೌರವಿಸುವುದು, ಪ್ರೋತ್ಸಾಹಿಸುವುದು ಮತ್ತು ಅವರಿಗೆ ವೇದಿಕೆ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ . 20 ವರ್ಷಗಳಿಂದಲೂ ನಾವು ಇದೇ ಪದ್ಧತಿ ಅನುಸರಿಸಿಕೊಂಂಡು ಬಂದಿದ್ದೇವೆ ಎಂದು ಶಾರದಾ ಸಂಗೀತ ಸಭಾದ ಕಾರ್ಯದರ್ಶಿ, ವಿದ್ವಾನ್ ಎಸ್. ಪ್ರಶಾಂತ್ ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited                

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMusic ProgramNews in KannadaNews KannadaSri Sharada Sangeetha Sabhaಬೆಂಗಳೂರುಶಾಸ್ತ್ರೀಯ ಸಂಗೀತಶ್ರೀ ಶಾರದಾ ಸಂಗೀತ ಸಭಾ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಾಯಿ-ಮಗು ಮರಣ ಪ್ರಮಾಣ ತಗ್ಗಿಸುವಲ್ಲಿ ನಿಗಾ ವಹಿಸಿ: ಡಿಸಿ ವೆಂಕಟೇಶ್ ಸೂಚನೆ

Next Post

ಫೆ.23: ಶಿವಮೊಗ್ಗದ ಪ್ರತಿಷ್ಠಿತ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ ಪ್ರದಾನ

kalpa News

kalpa News

Next Post
ಫೆ.23: ಶಿವಮೊಗ್ಗದ ಪ್ರತಿಷ್ಠಿತ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ ಪ್ರದಾನ

ಫೆ.23: ಶಿವಮೊಗ್ಗದ ಪ್ರತಿಷ್ಠಿತ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!