ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ಕಾರ್ಯಕರ್ತ ಪವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ವಹಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಪ್ರವೀಣ್ ಹತ್ಯೆ Praveen murder ಪ್ರಕರಣದಲ್ಲಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ದುಷ್ಕರ್ಮಿಗಳ ಕೈವಾಡ ಇರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲು ನಿರ್ಧರಿಸಿದ್ಧೇವೆ. ಮುಂದಿನ ತನಿಖೆಯನ್ನು ಅವರೇ ನಡೆಸಲಿದ್ದಾರೆ ಎಂದರು.
ಇನ್ನು ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯವನ್ನು ಪ್ರವೇಶಿಸುವ ಪ್ರತೀ ವಾಹನವನ್ನು ತಪಾಸಣೆಗೊಳಪಡಿಸಲಾಗುವುದು. ಗಡಿ ಭಾಗದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಭದ್ರತೆ ಬಿಗಿಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚುವರಿ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗಿದೆ ಎಂದರು.
ಇನ್ನು ಶೀಘ್ರದಲ್ಲೇ ಎಲ್ಲಾ ಧಾರ್ಮಿಕ ಮುಖಂಡರ ಸಭೆ ಕರೆಯಲಿದ್ದು, ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post