ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇತ್ತೀಚೆಗೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ NIA ದಾಳಿ ಹೆಚ್ಚಾಗಿದ್ದು, ಇಂದೂ ಕೂಡ ಬೆಂಗಳೂರು, ಬಳ್ಳಾರಿಯ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸಿದೆ.
ಕರ್ನಾಟಕದ 11 ಭಾಗಗಳು ಸೇರಿದಂತೆ 4 ರಾಜ್ಯಗಳ 19 ಕಡೆಗಳಲ್ಲಿ ಎನ್ ಐಎ ದಾಳಿ ಮುಂದುವರೆಸಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಸಿರಿಯಾ ಮತ್ತು ಇರಾಕ್ ಜಾಲದೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿ ಆಧಾರದ ಮೇಲೆ ಮೂಲಭೂತವಾದಿ ಜಿಹಾದಿ ಸಂಪರ್ಕಜಾಲವನ್ನು ಬೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಾರ್ಖಂಡ್ ನ ನಾಲ್ಕು ಕಡೆಗಳಲ್ಲಿ, ಮಹಾರಾಷ್ಟ್ರದ ಮೂರು ಕಡೆ ಮತ್ತು ದೆಹಲಿಯಲ್ಲಿ ಒಂದು ಕಡೆ ದಾಳಿ ಮಾಡಲಾಗಿದ್ದು, ಈ ವೇಳೆ ಲೆಕ್ಕಕ್ಕೆ ಸಿಗದ ನಗದು, ಡಿಜಿಟಲ್ ಸಾಧನಗಳು, ಸೂಕ್ಷ್ಮ ವಸ್ತುಗಳು ಸೇರಿದಂತೆ ಹಲವು ದಾಖಲೆಗಳನ್ನು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Also read: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ| ಇಂದಿನಿಂದಲೇ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ ೪೪ ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್‌ಐಎ ಇಂದು ವಾರದ ಆರಂಭದಲ್ಲಿಯೇ ತನ್ನ ಬೇಟೆ ಮುಂದುವರಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post