ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೋನಾ ಸೋಂಕು ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೊನಾ ನೆಗೆಟಿವ್ ವರದಿ ಕೇಳುತ್ತಿವೆ. ಹೀಗಾಗಿ ಸೋಂಕಿನ ಲಕ್ಷಣ ಇಲ್ಲದವರು ಕೊರೊನಾ ನೆಗೆಟಿವ್ ವರದಿಗೆ ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ಸೋಂಕಿನ ಲಕ್ಷಣ ಇಲ್ಲದವರ ಚಿಕಿತ್ಸೆಗೆ ಯಾವುದೇ ವರದಿ ಅಗತ್ಯವಿಲ್ಲ. ಆಸ್ಪತ್ರೆಯಲ್ಲಿ ದಾಖಲಸಿಕೊಂಡ ನಂತರ ಸೋಂಕಿನ ಲಕ್ಷಣಗಳು ಪತ್ತೆಯಾದರೆ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಿ ಪಾಸಿಟಿವ್ ಬಂದರೆ ಪ್ರತ್ಯೇಕ ವಾರ್ಡ್ ನಲ್ಲಿಟ್ಟು ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post