No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ

kalpa News by kalpa News
April 20, 2021
in ಬೆಂಗಳೂರು ನಗರ
0
ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಸಂಧಾನದ ಮಾತುಕತೆ ನಡೆದಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ತಮ್ಮ ಗಮನಕ್ಕೆ ಬಂದಿದೆ. ಆದರೆ ಆ ರೀತಿಯ ಯಾವುದೇ ಸಂಧಾನದ ಪ್ರಕ್ರಿಯೆ ನಡೆದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಪ್ರಾರಂಭದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಯಾವುದೇ ಮಾತುಕತೆ, ಸಂಧಾನದ ಅವಶ್ಯಕತೆ ಇರುವುದಿಲ್ಲ. ಮೊದಲು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿ ಎಂದು ತಾಕೀತು ಮಾಡಿದ್ದರು ಎಂದು ಹೇಳಿದ್ದಾರೆ.
ಕೆಲವು ಮುಖಂಡರು ತಾವು ಮುಷ್ಕರ ನಿರತರ ಪರವಾಗಿ ಇಂದು ಮಾನ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ತಿಳಿಸಿರುತ್ತಾರೆ. ಅದನ್ನು ತಾವು ಮಾಧ್ಯಮದಲ್ಲಿ ಗಮನಿಸಿದ್ದು, ತಾವು ಬೊಮ್ಮಾಯಿ ಅವರನ್ನು ಈ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿಗಳ ಮಾತನ್ನು ಮೀರಿ ಈಗ ಸಂಧಾನದ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿಗಳು ತಿಳಿಸಿದಂತೆ ಮೊದಲು ಅವರು ಕರ್ತವ್ಯಕ್ಕೆ ಹಾಜರಾಗಲಿ ಎಂದು ಅವರು ತಿಳಿಸಿದ್ದಾರೆ.

ಆದರೆ ಇದನ್ನು ತಿರುಚಿ ಮುಷ್ಕರ ನಿರತ ಸಾರಿಗೆ ನೌಕರರ ಮುಖಂಡರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಿರುವುದು ಸರಿಯಲ್ಲ. ಆದ್ದರಿಂದ, ಇನ್ನೂ ಕಾಲ ಮಿಂಚಿಲ್ಲ ಎಲ್ಲಾ ಸಾರಿಗೆ ನೌಕರ ಬಂಧುಗಳೂ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ.

ಇದು ಕೋವಿಡ್ ಸಂಕಷ್ಟದ ಕಾಲ: ಮುಷ್ಕರದ ಕಾಲವಲ್ಲ
ಪ್ರಸ್ತುತ ಇಡೀ ಮನುಕುಲವನ್ನೇ ಬೆಚ್ಚಿಬೀಳಿಸಿರುವ ಕೋವಿಡ್ -2ನೆಯ ಅಲೆಯ ತೀವ್ರ ಅಪಾಯದ ನಡುವೆಯೂ ನಮ್ಮ ಸಾರಿಗೆ ನೌಕರ ಮಿತ್ರರು ಸಾರಿಗೆ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಮತ್ತು ನೌಕರರ ಹಿತದೃಷ್ಟಿಯಿಂದಲೂ ಸೂಕ್ತವಲ್ಲ ಎಂದಿದ್ದಾರೆ.

ಕಳೆದ ವರ್ಷ ಕೋವಿಡ್ ಸಮಸ್ಯೆ ಉಲ್ಬಣವಾದಾಗ ನಮ್ಮ ಸಾರಿಗೆ ನೌಕರರೂ ಸಹ ಕೊರೋನಾ ವಾರಿಯರ್ಸ್‌ಗಳಾಗಿ ಹಗಲಿರುಳೂ ಕೆಲಸ ಮಾಡಿದ್ದನ್ನು ಯಾರೂ ಮರೆತಿಲ್ಲ. ಸರ್ಕಾರವೂ ಈ ಸೇವೆಯನ್ನು ಗೌರವಿಸಿ ಸಾರಿಗೆ ನೌಕರರ ಸಂಕಷ್ಟಗಳಿಗೆ ಸ್ಪಂದಿಸಿತ್ತು. ಆದರೆ ಈಗ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತೆ ಅದೇ ರೀತಿ ಕೊರೋನಾ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದರೂ ಮುಷ್ಕರದ ಕಾರಣದಿಂದ ಇದೇ ಸಾರಿಗೆ ನೌಕರರಿಗೆ ಕೆಟ್ಟ ಹೆಸರು ಬರುವಂತಾಗಿ ಅವರ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಬಸ್ಸುಗಳ ಸುಗಮ ಸಂಚಾರಕ್ಕೆ ಕೈಜೊಡಿಸುವ ಮೂಲಕ ಮತ್ತೊಮ್ಮೆ ತಾವು ಸಾರ್ವಜನಿಕ ಸ್ನೇಹಿ ನೌಕರರು ಎಂಬುದನ್ನು ಸಾಬೀತುಪಡಿಸುವುದಕ್ಕೆ ಇದು ಸೂಕ್ತ ಸಂದರ್ಭವಾಗಿದೆ. ಆದ್ದರಿಂದ ಕೂಡಲೇ ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕೆಂದು ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಪಿಡುಗಿನಿಂದ ಜನಜೀವನ ತತ್ತರಿಸಿ ಹೋಗುತ್ತಿರುವ ದೃಶ್ಯ ನಮ್ಮ ಕಣ್ಮುಂದೆಯೇ ಇದೆ. ಇಂಥ ವೈದ್ಯಕೀಯ ತುರ್ತಿನ ಸಂದರ್ಭದಲ್ಲಿ ಹೆಚ್ಚಾಗಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸರ್ಕಾರಿ ಸಾರಿಗೆ ಸೇವೆಯ ಅಗತ್ಯ ತೀರಾ ಹೆಚ್ಚಾಗಿರುತ್ತದೆ. ಆದಾಗ್ಯೂ 13ನೆಯ ದಿನದವರೆಗೂ ಈ ಮುಷ್ಕರವನ್ನು ಮುಂದುವರೆಸಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಸಾರಿಗೆ ನೌಕರರನ್ನು ಅವರು ಪ್ರಶ್ನಿಸಿದ್ದಾರೆ.

ಈ ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ರಾಜ್ಯಸರ್ಕಾರ ಸರ್ಕಾರ ಸಮರೋಪಾದಿಯಲ್ಲಿ ಶ್ರಮಿಸುತ್ತಿದೆ. ಸರ್ಕಾರದ ಈ ಪ್ರಯತ್ನಕ್ಕೆ ಅನೇಕ ಇಲಾಖೆಗಳ ಸಿಬ್ಬಂದಿಗಳು ಕೈಜೋಡಿಸಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಸಾರಿಗೆ ನಿಗಮಗಳ ನೌಕರರು ಮಾತ್ರ ಇಂಥ ಸೂಕ್ಷ್ಮ ಮತ್ತು ಸಂದಿಗ್ಧ ಪರಿಸ್ಥಿತಿಯಲ್ಲೂ ಈ ರೀತಿ ಮುಷ್ಕರ ನಿರತರಾದರೆ ಅವರಿಗೆ ಇದು ದೊಡ್ಡ ಕಪ್ಪು ಚುಕ್ಕೆಯಾಗುತ್ತದೆ ಎಂಬುದನ್ನು ಮರೆಯಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಇತರ ಸಚಿವ ಸಹೋದ್ಯೋಗಿಗಳೂ ಹಲವು ಬಾರಿ ಮುಷ್ಕರ ನಿರತರಿಗೆ ಮನವಿ ಮಾಡಿಕೊಂಡಿದ್ದರೂ ಸಹ ಅವರು ಮುಷ್ಕರ ನಡೆಸುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8ಬೇಡಿಕೆಗಳನ್ನು ಈಡೇರಿಸಲಾಗಿದ್ದು, ಇನ್ನುಳಿದ ಒಂದು ಬೇಡಿಕೆಯಾದ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಪ್ರಸ್ತುತ ಮೇ.4ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ವೇತನ ಹೆಚ್ಚಳದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಚುನಾವಣಾ ನೀತಿ ಸಂಹಿತೆಯು ಮುಗಿದ ನಂತರ ವೇತನ ಹೆಚ್ಚಳದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಹಿಂಸಾಕೃತ್ಯಗಳಿಂದ ಬೇಡಿಕೆ ಈಡೇರುವುದಿಲ್ಲ:
ಪ್ರಸ್ತುತ ಸಹಸ್ರಾರು ಮಂದಿ ಸಾರಿಗೆ ನೌಕರರು ತಮ್ಮ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಇದರ ಫಲಶೃತಿಯಾಗಿ ಈಗ ಪ್ರತಿನಿತ್ಯವೂ ಸುಮಾರು 7 ಸಾವಿರ ಸರ್ಕಾರಿ ಬಸ್ಸುಗಳು ಸಂಚರಿಸುವಂತಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಖಾಸಗಿ ವಾಹನಗಳೂ ಸಂಚಾರ ಸೇವೆಗೆ ಲಭ್ಯವಾಗಿ ಒಟ್ಟಾರೆ ಬಸ್ಸುಗಳ ಸಂಚಾರದ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಕೆಲವು ಮುಷ್ಕರ ನಿರತರ ಮುಖಂಡರು ಹತಾಶರಾಗಿ ಕರ್ತವ್ಯಕ್ಕೆ ಹಾಜರಾಗುತ್ತಿರುವ ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಪ್ರಚೋದಿಸುತ್ತಿರುವುದನ್ನು ಉಪಮುಖ್ಯಮಂತ್ರಿ ಸವದಿ ಖಂಡಿಸಿದ್ದಾರೆ.

ಈಗಾಗಲೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪ ನಿಷ್ಠಾವಂತ ಚಾಲಕರಾಗಿದ್ದ ಅವಟಿ ಅವರು ಕರ್ತವ್ಯದಲ್ಲಿದ್ದಾಗ ಅವರ ಮೇಲೆ ಹಲ್ಲೆ ನಡೆಸಿ ಅವರ ಜೀವವನ್ನೇ ಬಲಿ ತೆಗೆದುಕೊಂಡಿದ್ದು ಅತ್ಯಂತ ಹೀನ ಘಟನೆಯಾಗಿದೆ. ಇದರಿಂದಾಗಿ ತೀವ್ರ ಸಂಕಷ್ಟಕ್ಕೀಡಾದ ಅವಟಿ ಅವರ ಕುಟುಂಬಸ್ಥರಿಗೆ ಈಗಾಗಲೇ 30 ಲಕ್ಷ ರೂಪಾಯಿ ಪರಿಹಾರ ನೀಡಿದ್ದಲ್ಲದೇ, ಅವರ ಕುಟುಂಬದ ಒಬ್ಬ ಸದಸ್ಯರಿಗೆ ಸೂಕ್ತ ಉದ್ಯೋಗವನ್ನು ಸಾರಿಗೆ ನಿಗಮದಲ್ಲೇ ಕಲ್ಪಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ಧಾರೆ.

ಈ ಮುಷ್ಕರದ ನೆಪದಲ್ಲಿ ಈಗಾಗಲೇ ಒಟ್ಟು 110ಕ್ಕೂ ಹೆಚ್ಚು ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಸಾರಿಗೆ ನಿಗಮಗಳಿಗೆ ಅಪಾರ ಹಾನಿ ಉಂಟು ಮಾಡಲಾಗಿದೆ. ಇಂದು ಕೂಡ ಕೆಎಸ್‌ಆರ್‌ಟಿಸಿಯ 3 ಬಸ್ಸುಗಳಿಗೆ ಕನಕಪುರ-ಹಾರೋಹಳ್ಳಿ ಮಾರ್ಗದಲ್ಲಿ ಕಲ್ಲು ಹೊಡೆದು, ಕರ್ತವ್ಯಕ್ಕೆ ಬರುತ್ತಿದ್ದ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು ತೀವ್ರ ಖಂಡನೀಯವಾಗಿದೆ. ಈ ರೀತಿಯ ದುಷ್ಕೃತ್ಯಗಳನ್ನು ರಾಜ್ಯ ಸರ್ಕಾರ ಎಂದಿಗೂ ಸಹಿಸುವುದಿಲ್ಲ ಎಂಬುದನ್ನು ಈ ದುಷ್ಕರ್ಮಿಗಳು ಅರ್ಥಮಾಡಿಕೊಳ್ಳಬೇಕು. ಮುಷ್ಕರದ ನೆಪದಲ್ಲಿ ಕೆಲವರು ನೌಕರ ವರ್ಗದವರಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಸಿ ಸರ್ಕಾರದ ವಿರುದ್ಧ ಹಾಗೂ ಕರ್ತವ್ಯ ನಿಷ್ಠೆ ಮೆರೆಯುತ್ತಿರುವ ನಮ್ಮ ಸಾರಿಗೆ ನೌಕರರ ವಿರುದ್ಧ ಪ್ರಚೋದಿಸುತ್ತಿದ್ದಾರೆ. ಕಾನೂನುಬಾಹಿರ ಕೃತ್ಯಗಳಿಗೆ ಮುಂದಾಗುವವರು ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರ ಅಮೂಲ್ಯ ಆಸ್ತಿಯಾಗಿರುವ ಈ ಬಸ್ಸುಗಳನ್ನು ಧ್ವಂಸಗೊಳಿಸಲು ಯಾರಿಗೂ ಹಕ್ಕಿಲ್ಲ. ಅಷ್ಟೇ ಅಲ್ಲದೆ ರಾಜ್ಯ ಸಾರಿಗೆ ನೌಕರರ ಮಕ್ಕಳು ಮತ್ತು ಕುಟುಂಬದವರನ್ನು ಬೀದಿಗೆ ತಂದು ಭಿಕ್ಷಾಟನೆಗೆ ತಳ್ಳಿದ್ದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು. ಒಂದೆಡೆ ಮುಷ್ಕರ ನಿರತರು ಶಾಂತಿಯುತ ಹೋರಾಟ ನಡೆಸುತ್ತೇವೆ ಎಂದು ಹೇಳುತ್ತಲೇ ಮತ್ತೊಂದೆಡೆ ಸಹೋದ್ಯೋಗಿಗಳ ಮೇಲೆ ಹಲ್ಲೆ ನಡೆಸುವುದು ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟಗಳಂತಹ ಹಿಂಸಾಕೃತ್ಯಗಳನ್ನು ನಡೆಸುವುದು ನಿಜಕ್ಕೂ ಜನವಿರೋಧಿ ಬೆಳವಣಿಗೆಯಾಗಿದೆ. ಈ ಸಂಬಂಧ ಈಗಾಗಲೇ ಹಲವು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದಿದ್ದಾರೆ.

ಪ್ರಸ್ತುತ ಸಾರಿಗೆ ವ್ಯವಸ್ಥೆಯಲ್ಲಿ ಸರ್ಕಾರ ಕೈಗೊಂಡಿರುವ ಪರ್ಯಾಯ ವ್ಯವಸ್ಥೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಹತಾಶಗೊಂಡಿರುವ ಕೆಲವು ಮುಷ್ಕರ ನಿರತರು ಸರ್ಕಾರದ ಪ್ರಾಮಾಣಿಕ ಸ್ಪಂದನೆಯ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ. ಕೆಲವು ಪಟ್ಟಭದ್ರರು ಸರ್ಕಾರದ ವಿರುದ್ಧ ನೌಕರರನ್ನು ಎತ್ತಿಕಟ್ಟಿ ನೌಕರರಿಗೇ ಗಂಡಾಂತರ ತಂದೊಡ್ಡಲು ಹವಣಿಸುತ್ತಿದ್ದಾರೆ. ಆದರೆ ಇವರ ದಾಳಕ್ಕೆ ಯಾರೂ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ.

ಸಾರಿಗೆ ನೌಕರರನ್ನೂ ಒಳಗೊಂಡಂತೆ ನಮ್ಮೆಲ್ಲರ ಮೇಲೂ ಕೋವಿಡ್ ನಿಯಂತ್ರಿಸುವ ಸಾಮಾಜಿಕ ಜವಾಬ್ದಾರಿಯಿದೆ. ಹೀಗಿರುವಾಗ ನಾವು ನಮ್ಮ ಕರ್ತವ್ಯಕ್ಕೆ ಚ್ಯುತಿ ತರಬಾರದು. ನಮ್ಮ ಸಾರಿಗೆ ನೌಕರರು ಮತ್ತೆ ಮೊದಲಿನಂತೆ ಉತ್ಸಾಹದಿಂದ ಕರ್ತವ್ಯಕ್ಕೆ ಮರಳಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿ ಈ ಸೂಕ್ಷ್ಮ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಎಂದು ಸಾರ್ವಜನಿಕರಿಂದ ಮತ್ತೊಮ್ಮೆ ಪ್ರಶಂಸೆಗೆ ಪಾತ್ರರಾಗಲಿ ಎಂದು ಉಪಮಖ್ಯಮಂತ್ರಿ ಲಕ್ಷ್ಮಣ ಸವದಿ ಹಾರೈಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCM BS YadiyurappaCOVID 19DCM Lakshmana SavadiKannada News WebsiteKSRTC Employee protestLatest News KannadaState Newsಕೋವಿಡ್ 2ನೆಯ ಅಲೆಗೃಹ ಸಚಿವ ಬಸವರಾಜ ಬೊಮ್ಮಾಯಿಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಸಾರಿಗೆ ನೌಕರರ ಮುಷ್ಕರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ ರಾಮೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನಕ್ಕೆ ಯತ್ನ!

Next Post

ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

kalpa News

kalpa News

Next Post
ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL