No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೆಡಿಎಸ್ ಮತ ಒಡೆಯುವುದು ಯಾರಿಂದಲೂ ಸಾಧ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ

ರಾಜ್ಯಸಭೆ ಚುನಾವಣೆ ಹಿನ್ನೆಲೆ ಬೆಂಗಳೂರು ಯುವ ಜನತಾದಳ ಸಂಘಟನಾ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 6, 2022
in ಬೆಂಗಳೂರು ನಗರ, ರಾಜಕೀಯ
0
ಜೆಡಿಎಸ್ ಮತ ಒಡೆಯುವುದು ಯಾರಿಂದಲೂ ಸಾಧ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್‍) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ Nikil Kumvaraswamy ನೇರವಾಗಿ ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ನಿನ್ನೆಯ ದಿನ ಸಿದ್ದರಾಮಯ್ಯ ಅವರು ಆತ್ಮಸಾಕ್ಷಿಯ ಮತಗಳ ಬಗ್ಗೆ ಮಾತನಾಡಿದ್ದಾರೆ. ನಮ್ಮ ಪಕ್ಷದಲ್ಲಿರುವ ಶಾಸಕರಿಗೂ ಆತ್ಮಸಾಕ್ಷಿ ಇದೆ. ನಮ್ಮ ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಎಂದು ನೇರವಾಗಿ ಹೇಳುತ್ತೇನೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಅಸಮಾನತೆ ಎದ್ದು ಕಾಣುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ. ನಮ್ಮಲ್ಲಿ ಯಾವುದೇ ರೀತಿಯ ಅಸಮಾನತೆ ಇಲ್ಲ. ಕೇವಲ ಒಬ್ಬರು, ಇಬ್ಬರು ಶಾಸಕರಲ್ಲಿ ಮಾತ್ರ ಅಸಮಾಧಾನ ಇತ್ತು. ಅವರ ಅಸಮಾಧಾನವನ್ನು ಸರಿ ಪಡಿಸಿದ್ದೇವೆ. ಹೀಗಾಗಿ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದಾರೆ ಎಂದು ನಿಖಿಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎಲ್ಲರೂ ನಮ್ಮ ಪಕ್ಷದಲ್ಲಿಯೇ ಇರುತ್ತಾರೆ. ಜೂನ್ 10ರಂದು ಅದು ಸಾಬೀತಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಚಿಹ್ನೆಯ ಮೇಲೆ ಗೆದ್ದಿದ್ದೇನೆಂದು ಐದಾರು ದಿನಗಳ ಹಿಂದಷ್ಟೇ ಮಾಧ್ಯಮಗಳ ಮುಂದೆ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಹೇಳಿದ್ದಾರೆ. ಹಾಗಾಗಿ ಪಕ್ಷದ ಶಾಸಕರ ಮತಗಳು ಬೇರೆ ಕಡೆ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಅವರು ಒತ್ತಿ ಹೇಳಿದರು.

ಯುವ ಘಟಕ ಕ್ರಿಯಾಶೀಲವಾಗಿದೆ:
ಬಿಬಿಎಂಪಿ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ಸೂಕ್ತ ವ್ಯಕ್ತಿಗಳಿಗೆ ಟಿಕೆಟ್ ನೀಡುತ್ತೇವೆ. ಪಕ್ಷದಲ್ಲಿ ನಾಯಕರು ಚರ್ಚಿಸಿದ‌ ಬಳಿಕ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ. ಯುವ ಘಟಕ ತುಂಬಾ ಸಕ್ರಿಯವಾಗಿದ್ದು, ಪ್ರತಿಯೊಂದು ವಿಚಾರದಲ್ಲೂ ಪ್ರಚಾರ ಪಡೆಯುತ್ತಿಲ್ಲ. ಯುವ ಘಟಕ ಸುಮ್ಮನೆ ಕುಳಿತಿಲ್ಲ. ಜನತಾ ಜಲಧಾರೆ ಸಮಾವೇಶದಲ್ಲಿ ಪಕ್ಷದ ಯುವ ಘಟಕ ಉತ್ತಮವಾಗಿ ಕೆಲಸ ಮಾಡಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

Also read: ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಕ್ಕೆ 5ಲಕ್ಷ ರೂ. ಪರಿಹಾರ – ಸಿಎಂ

ಕುವೆಂಪು ಅವರಿಗೆ ಅವಮಾನ ಸರಿಯಲ್ಲ:
ರಾಷ್ಟ್ರಕವಿ‌ ಕುವೆಂಪು ಸಮಾಜದ ದೊಡ್ಡ ವ್ಯಕ್ತಿ. ಅವರಿಗೆ ಅವಮಾನ ಮಾಡಿರೋದನ್ನು ಖಂಡಿಸುತ್ತೇನೆ. ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕ ಮಾತ್ರವಲ್ಲ, ಇಡೀ ಜಗತ್ತು ಗೌರವಿಸುವಂತ ಮಹಾನ್ ಸಾಹಿತಿಗಳು. ನಮ್ಮ ನಾಡಿನ ಪ್ರಾತಃಸ್ಮರಣೀಯರು. ಅಂತಹವರ ಬಗ್ಗೆ ಲಘುವಾಗಿ ಮಾತನಾಡುವುದು ಹಾಗೂ ನಾಡಗೀತೆ ಅಪಮಾನ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ನಿಖಿಲ್ ಅವರು ಹೇಳಿದರು.

ಸಿನಿಮಾದಲ್ಲಿ ಜನ ನನ್ನನ್ನು ಗುರುತಿಸಿದ್ದಾರೆ. ಪಕ್ಷ ನನಗೆ ದೊಡ್ಡ ಜವಾಬ್ದಾರಿ ನೀಡಿದೆ. ಸಿನಿಮಾ ಹಾಗೂ ಪಕ್ಷ ಸಂಘಟನೆ ಎರಡನ್ನೂ ನಿಭಾಯಿಸುತ್ತೇನೆ. ಜನರ ಸೇವೆ ಮಾಡಿಕೊಂಡೇ ಎಲ್ಲವನ್ನೂ ನಿಭಾಯಿಸುತ್ತೇನೆ ಎಂದರು ಅವರು.

ರಾಜ್ಯದಲ್ಲಿ ಪ್ರವಾಸ:
ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಎಲ್ಲಾ ಜಿಲ್ಲಾ ಕೇಂದ್ರಗಳಿಗೂ ಭೇಟಿ ನೀಡುತ್ತೇನೆ. ಉತ್ತರ ಕರ್ನಾಟಕದಿಂದಲೇ ಪ್ರವಾಸ ಮಾಡುತ್ತೇನೆ ಎಂದು ಇದೇ ವೇಳೆ ನಿಖಿಲ್ ಅವರು ಹೇಳಿದರು.

ರಾಮನಗರದಲ್ಲಿ ಸ್ಪರ್ಧೆ ದೂರದ ಮಾತು:
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ರಾಮನಗರದಿಂದ ನಾನು ಸ್ಪರ್ಧಿಸುವುದು ದೂರದ ಮಾತು. ನನಗೆ ಪಕ್ಷ ಜವಾಬ್ದಾರಿ ನೀಡಿದ್ದು, ಮೊದಲು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮತ್ತಿತರರು ಉಪಸ್ಥಿತರಿದ್ದರು.

ಸಂಘಟನಾ ಸಭೆ:
ಇದಾದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯ ಕಚೇರಿಯಲ್ಲಿ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಿಧಾನಸಭೆ ಕ್ಷೇತ್ರಗಳ ವಾರ್ಡ್ ವಾರು ಸಂಘಟನಾ ಸಭೆ ನಡೆಸಿದರು.

ಯುವ ಮುಖಂಡರ ಕುಂದುಕೊರತೆಗಳನ್ನು ನಿಖಿಲ್ ಅವರು ಅಲಿಸಿದರಲ್ಲದೆ, ಎಲ್ಲ ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಎಲ್ಲ ವಾರ್ಡ್ ಗಳ ಯುವ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲ ಕ್ಷೇತ್ರಗಳಲ್ಲಿ ಇರುವ ಸಮಸ್ಯೆಗಳನ್ನು ಮುಖಂಡರು ನಿಖಿಲ್ ಅವರ ಗಮನಕ್ಕೆ ತಂದರು. ಅವನ್ನು ಕೂಡಲೇ ಬಗೆಹರಿಸುವ ಭರವಸೆಯನ್ನು ಯುವ ಅಧ್ಯಕ್ಷರು ನೀಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaNikil KumvaraswamyPolitical Newsನಿಖಿಲ್ ಕುಮಾರಸ್ವಾಮಿಬೆಂಗಳೂರು
Share196Tweet123Send
Previous Post

ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಕ್ಕೆ 5ಲಕ್ಷ ರೂ. ಪರಿಹಾರ – ಸಿಎಂ

Next Post

ಗಮನಿಸಿ! ಎರ್ನಾಕುಲಂ ರೈಲುಗಳ ಕೊನೆದಾಣ ಬದಲು: ಎಲ್ಲಿಯವರೆಗೆ ಸಂಚರಿಸಲಿದೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗಮನಿಸಿ! ಎರ್ನಾಕುಲಂ ರೈಲುಗಳ ಕೊನೆದಾಣ ಬದಲು: ಎಲ್ಲಿಯವರೆಗೆ ಸಂಚರಿಸಲಿದೆ ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL