ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದ್ದು, ಪೊಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.
ಪೋಕ್ಸೋ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ನ ನ್ಯಾಯಾಧೀಶರಾದ ರಮೇಶ್, ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದು, ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆ ಇದೆ.
Also read: ಇಂದಿನಿಂದ ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ವೈಭವ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ನಿನ್ನೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಬಿಎಸ್ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿ.ಎಸ್. ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ನಿನ್ನೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























