ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ Bomb threat to School ಬಂದ ಬೆನ್ನಲ್ಲೇ, ಕಳೆದ ಒಂದೂವರೆ ತಿಂಗಳಲ್ಲಿ ಹಲವು ದೇಶಗಳ ನೂರಾರು ಶಾಲೆಗಳಿಗೆ ಇದೇ ರೀತಿ ಬೆದರಿಕೆ ಇ ಮೇಲ್ ಬಂದಿವೆ ಎಂಬ ಮಾಹಿತಿ ಹೊರಬಿದ್ದಿದೆ.
ಬೆಂಗಳೂರಿನ ಹಲವು ಪ್ರತಿಷ್ಠಿತ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳ ಇ ಮೇಲ್ ಮೂಲಕ ಬಂದಿದ್ದು, ಆರೋಪಿಗಳ ಬಂಧನ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಈಗ ಇದೇ ರೀತಿ ವಿವಿಧ ದೇಶಗಳ ನೂರಾರು ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ ಮೇಲ್’ಗಳು ಬಂದಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಅಲ್ಲಿನ ಪೊಲೀಸರು ಬಲೆ ಬೀಸಿದ್ದಾರೆ.
ಯಾವ ದೇಶಗಳಲ್ಲಿ ಬೆದರಿಕೆ?
ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಮಲೇಷ್ಯಾ, ಜರ್ಮನಿ ಹಾಗೂ ಟ್ರಿನಿಡಾಡ್ ದೇಶಗಳ ನೂರಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದ್ದು, ಅಲ್ಲಿನ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Also read: ಪ್ರಧಾನಿ ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಟಲಿ ಪ್ರಧಾನಿ ಮೆಲೋನಿ ಹೇಳಿದ್ದೇನು?
ಆದರೆ, ಈ ಬೆದರಿಕೆ ಇ ಮೇಲ್’ಗಳನ್ನು ಯಾರು, ಎಲ್ಲಿಂದ ಕಳುಹಿಸಿದ್ದಾರೆ ಎಂಬುದು ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದೇ ವೇಳೆ ಬೆಂಗಳೂರಿನ ಶಾಲೆಗಳಿಗೆ ಬಂದ ಬೆದರಿಕೆ ಇ ಮೇಲ್’ಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರ ಭದ್ರತಾ ಇಲಾಖೆಯ ಸಹಕಾರವನ್ನೂ ಸಹ ಪಡೆಯಲಾಗುತ್ತಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post